ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಆಯ್ಕೆ

ಬೆಂಗಳೂರು, ಜನವರಿ,20,2026 (www.justkannada.in): ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ  ಆಯ್ಕೆಯಾಗಿದ್ದಾರೆ.

ಶಾಮನೂರು ಶಿವಶಂಕಪ್ಪ ಅವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಹಲವು ಘಟಾನುಘಟಿ ನಾಯಕರ ಹೆಸರು ಕೇಳಿಬಂದಿದ್ದವು.ಆದರೆ ಅಂತಿಮವಾಗ ಇಂದು ಬೆಂಗಳೂರಿನ ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈಶ್ವರ್ ಖಂಡ್ರೆ ಅವರನ್ನು ಅವಿರೋಧ ಆಯ್ಕೆ ಮಾಡಲಾಗಿದೆ.

ಸಚಿವ ಈಶ್ವರ್ ಖಂಡ್ರೆ ಅವರು ಪ್ರಸ್ತುತ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಇದೀಗ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಆಯ್ಕೆಯಾಗಿದ್ದಾರೆ.

ಸಭೆಗೆ ವಿವಿಧ ರಾಜ್ಯಗಳಿಂದ ಕಾರ್ಯಕಾರಿ ಮಂಡಳಿ ಸದಸ್ಯರು ಆಗಮಿಸಿದ್ದರು. ಇದರೊಂದಿಗೆ ಈಶ್ವರ್ ಖಂಡ್ರೆ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಅಧ್ಯಕ್ಷ ಎನ್ನಿಸಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಚಿವ ಈಶ್ವರ್ ಖಂಡ್ರೆ, ನನಗೆ ಈ ಜವಾಬ್ದಾರಿ ಕೊಟ್ಟಿದ್ದು ನನ್ನ ಸೌಭಾಗ್ಯ ಈವರೆಗೂ 23 ನಾಯಕರು ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದಾರೆ.  ನಾನು ಈಗ 24ನೇ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ ಎಂದರು.

Key words: Minister, Ishwar Khandre, elected, President, All India Veerashaiva Mahasabha