ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಸಾಕಷ್ಟು ರಕ್ಷಣೆ-ಕೇಂದ್ರ ಸಚಿವ HDK ಕಿಡಿ

ಹಾಸನ,ಜನವರಿ,21,2026 (www.justkannada.in): ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ,  ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಸಾಕಷ್ಟು ರಕ್ಷಣೆ ಸಿಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಘಟನೆ ಬೆಳಕಿಗೆ ಬಂದ ಕೂಡಲೇ ಡಿಜಿಪಿ ಅಮಾನತು ಮಾಡಬೇಕಿತ್ತು ರಾಮಚಂದ್ರರಾವ್ ಹಿನ್ನೆಲೆ ಏನು?  ಭ್ರಷ್ಟಾಚಾರದ ಕುರಿತು ಚರ್ಚಿಸದ ರೀತಿ ಅಧಿಕಾರಿಗಳು ಅಂತಹ ವಾತಾವರಣ ನಿರ್ಮಾಣ ಮಾಡಿಕೊಂಡಿದ್ದಾರೆ.  2016 2017ರಲ್ಲಿ ಬಿಳಿಕೆರೆ ಬಳಿ ಬಸ್ ನಲ್ಲಿ ಕಳ್ಳತನ ಮಾಡಿದ್ದರು. ಭ್ರಷ್ಟ ಅಧಿಕಾರಿಗಳಿಗೆ ಈ ಸರ್ಕಾರದಲ್ಲಿ ಸಾಕಷ್ಟು ರಕ್ಷಣೆ ಸಿಗುತ್ತಿದೆ ಬೇರೆಯಾ ಸರ್ಕಾರದಲ್ಲೂ ಭ್ರಷ್ಟ ಅಧಿಕಾರಿಗಳಿಗೆ ಇಷ್ಟು ರಕ್ಷಣೆ ಇಲ್ಲ ಎಂದು ಕಿಡಿಕಾರಿದರು.

ಅಬಕಾರಿ ಡಿಸಿ 2 ಲಕ್ಷ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದಿದ್ದರು. ಅಧಿಕಾರಿಗಳನ್ನೇ ಲೋಕಾಯುಕ್ತ ಪೊಲೀಸರು ಹಿಡಿದಿದ್ದಾರೆ.  ಇದಕ್ಕಿಂದ ದಾಖಲೆ ಏನು ಬೇಕು ನಿಮಗೆ.  ಕಾಂಗ್ರೆಸ್ ಸರ್ಕಾರದ ಕರ್ಮಕಾಂಡ ಹೇಳಲು ಬೇಕಾದಷ್ಟು ಇದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ದ ಹೆಚ್ ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

Key words: protection, corrupt, officials, Congress government, HDK