ಬೆಂಗಳೂರು,ಜನವರಿ,21,2026 (www.justkannada.in): ಅಂತರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನ ಮತ್ತೆ ಬೆಂಗಳೂರಿಗೆ ತರುತ್ತೇವೆ ಎಂದು ಕೆಎಸ್ ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೆಂಕಟೇಶ್ ಪ್ರಸಾದ್, ಎಲ್ಲವನ್ನೂ ಮಾಡುವುದು ಸುಲಭವಲ್ಲ. ಕರ್ನಾಟಕ ಸರ್ಕಾರ ನಮ್ಮ ಜೊತೆಗಿದೆ. ಜಿಬಿಎ ಬೆಸ್ಕಾಂ, ಪೊಲೀಸ್ ಇಲಾಖೆಯ ವಿಶ್ವಾಸ ಗಳಿಸುತ್ತೇವೆ. ಕ್ರಿಕೆಟ್ ಅಭಿಮಾನಿಗಳಿಗೆ ಮಾತು ಕೊಡುತ್ತಿದ್ದೇವೆ. ಅಂತರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನ ಮತ್ತೆ ಬೆಂಗಳೂರಿಗೆ ತರುತ್ತೇವೆ. ಬೆಂಗಳೂರಿನಲ್ಲಿ ಪಂದ್ಯಗಳನ್ನು ಆಡಿಸಲು ಹಗಲಿರುಳು ಶ್ರಮಿಸಿದ್ದೆವೆ ಎಂದರು.
ಆರ್ ಸಿಬಿ ಮ್ಯಾನೇಜ್ ಮೆಂಟ್ ಗೆ ನಾವೂ ಸಹ ಮನವಿ ಮಾಡುತ್ತಿದ್ದೇವೆ. ಏನೇ ಸಂಶಯಗಳಿದ್ದರೂ ಸರ್ಕಾರದ ಜೊತೆ ಮಾತನಾಡಲಿ. ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ನಡೆದ ದುರಂತದ ತನಿಖಾ ವರದಿ ನೀಡಿರುವ ಕುನ್ಹಾ ಸಮಿತಿಯ ಶಿಫಾರಸ್ಸುಗಳನ್ನು ನಾವು ಪಾಲಿಸಲು ಬದ್ಧರಾಗಿದ್ದೇವೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಅಹಿತಕರ ಘಟನೆಗಳು ನಡೆಯ ಬಾರಿದಿತ್ತು. ಈ ಘಟನೆ ಕೆಎಸ್‌ಸಿಎ ಆಡಳಿತ ಮಂಡಳಿಗೆ ನೋವು ತಂದಿದೆ. ಇಂತಹ ಘಟನೆಗಳ ನಡೆಯದಂತೆ ತಡೆಯಲು ಬೇಕಾದ ವ್ಯವಸ್ಥೆಗಳನ್ನು ನಾವು ಮಾಡಿಕೊಳ್ಳುತ್ತಿದ್ದೇವೆ. ನಾವು ಕೈಗೊಳ್ಳಬಹುದಾದ ಸುರಕ್ಷತೆಯ 3ಡಿ ಡ್ರಾಯೊಂಗ್ ಸಹ ನಾವು ನೀಡಿದ್ದೇವೆ ಎಂದು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದರು.
Key words: international, IPL matches, Bengaluru, Venkatesh Prasad







