ಬೆಂಗಳೂರು,ಜನವರಿ,22,2026 (www.justkannada.in): ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರ ನೀಡಿದ ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಡೆ ಸಂವಿಧಾನ ಬಾಹಿರ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಇಂದಿನಿಂದ ಪ್ರಾರಂಭವಾಗಿರುವ ವಿಧಾನ ಮಂಡಲ ವಿಶೇಷ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳಿದ ರಾಜ್ಯಪಾಲರ ನಡೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಸಿದ್ದಪಡಿಸಿದ ಭಾಷಣ ಓದುವ ಆಗಿಲ್ಲ. ರಾಜ್ಯಪಾಲರೇ ರೆಡಿ ಮಾಡಿ ಭಾಷಣ ಓದವಂತಿಲ್ಲ. ಸರ್ಕಾರ ಕೊಟ್ಟಿರುವ ಭಾಷಣವನ್ನೇ ಓದಬೇಕಿದೆ. ಸಂವಿಧಾನ ಪ್ರಕಾರ ಭಾಷಣ ಮಾಡೋದು ರಾಜ್ಯಪಾಲರ ಕರ್ತವ್ಯ ವರ್ಷದ ಮೊದಲ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯಪಾಲರು ತಾವೇ ರೆಡಿ ಮಾಡಿದ ಭಾಷಣ ಓದಿದ್ದಾರೆ. ರಾಜ್ಯಪಾಲರು ಕೇಂದ್ರದ ಕೈಗೊಂಬೆ ರೀತಿ ವರ್ತಿಸಿದ್ದಾರೆ. ರಾಜ್ಯಪಾಲರ ನಡೆ ಸಂವಿಧಾನ ಬಾಹಿರ. ರಾಜ್ಯಪಾಲ ಗೆಹ್ಲೋಟ್ ತಮ್ಮ ಕರ್ತವ್ಯವನ್ನ ನಿರ್ವಹಿಸಿಲ್ಲ. ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಶಾಸಕರು ಪ್ರತಿಭಟನೆ ಮಾಡುತ್ತಾರೆ ಎಂದರು.
ಮನ್ ರೇಗಾ ಬದಲಿಗೆ ವಿ ಬಿಜಿ ರಾಮ್ ಜಿ ಕಾಯ್ದೆ ತಂದಿದ್ದಾರೆ. ಯೋಜನೆಯಲ್ಲಿ ಮಹಾತ್ಮ ಗಾಂಧೀಜಿ ಅವರ ಹೆಸರನ್ನ ತೆಗೆದು ಹಾಕಿದ್ದಾರೆ. ತಂದಿರುವ ಈ ಕಾಯ್ದೆಯನ್ನ ರದ್ದು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.
Key words: Governor, Session, unconstitutional, CM Siddaramaiah







