ಮೈಸೂರು,ಜನವರಿ,22,2026 (www.justkannada.in): ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಹಿನ್ನೆಲೆ ಮೈಸೂರಿನಲ್ಲಿ ಇಂದು ಶ್ರೀರಾಮ ಗೆಳೆಯರ ಬಳಗದ ವತಿಯಿಂದ ಆಚರಿಸಲಾಯಿತು.
ನಗರದ ಚಾಮುಂಡಿಪುರಂ ವೃತ್ತದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ, ಶ್ರೀರಾಮನ ಭವ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ಪೂಜಾ ಕಾರ್ಯಕ್ರಮದ ನಂತರ ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕೆ.ಆರ್. ಕ್ಷೇತ್ರದ ಬಿಜೆಪಿ ಅಧ್ಯಕ್ಷ ಗೋಪಾಲ ರಾಜೇ ಅರಸ್, ಬಿಜೆಪಿ ಮುಖಂಡರಾದ ಜೋಗಿ ಮಂಜು, ಬಳಗದ ಅಧ್ಯಕ್ಷ ಸಂದೀಪ್ ಚಂದ್ರಶೇಖರ್, ಮುಖಂಡರಾದ ಬಸವರಾಜ, ಕಿರಣ್, ಮೋಹನ್, ಮಲ್ಲೇಶ್, ಕುಶಾಲ್, ಮಹೇಶ್ ಅರಸ್, ಭಾನು, ಶೇಖರ್, ಶಿವಪ್ರಸಾದ್, ರಾಘವೇಂದ್ರ, ರಘು ರಾಮ್ ಅರಸ್, ಪ್ರಭುಶಂಕರ್, ಅಜ್ಗರ್, ಸುರೇಶ್, ಕುಮಾರ್, ರಾಜೇಂದ್ರ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
Key words: ayodya, Shri Ram temple, Mysore







