ಬೆಂಗಳೂರು,ಜನವರಿ,22,2026 (www.justkannada.in): ವಿಧಾನಮಂಡಲ ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡದೇ ಕೇವಲ ಒಂದೇ ಸಾಲಿನಲ್ಲಿ ಭಾಷಣ ಮುಗಿಸಿ ಹೊರಟ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ರಾಜ್ಯಪಾಲರು ಅಧಿವೇಶನ ಉದ್ದೇಶಿಸಿ ಭಾಷಣ ಮಾಡದೇ ತೆರಳಿರುವುದು ಖಂಡನೀಯ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ರೀತಿ ವರ್ತಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕೇರಳ , ತಮಿಳೂನಾಡಿನಲ್ಲೂ ಅಲ್ಲಿನ ರಾಜ್ಯಪಾಲರು ಇದೇ ರೀತಿ ಮಾಡಿದರು. ಈಗ ಕರ್ನಾಟಕದಲ್ಲೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಓದದೇ ಹೋಗಿದ್ದಾರೆ. ರಾಜ್ಯಪಾಲರನ್ನ ವಜಾ ಮಾಡುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡುತ್ತೇವೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.
Key words: appeal, President, dismiss, Governor, Congress MLA







