ಮಾದಪ್ಪನ ದರ್ಶನ ಪಡೆದು ವಾಪಸ್ಸಾಗುವಾಗ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ

ಚಾಮರಾಜನಗರ,ಜನವರಿ,23,2026 (www.justkannada.in):  ಮಲೇ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್ ಬರುತ್ತಿದ್ದ ವೇಳೆ ಲಾರಿ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ನಡೆದಿದೆ.

ಹನೂರು ಪಟ್ಟಣದ ಅಗ್ನಿಶಾಮಕದಳ ಠಾಣೆ ಬಳಿ ಈ ದುರ್ಘಟನೆ ನಡೆದಿದೆ.  ಗಣೇಶ್(30) ಮೃತಪಟ್ಟ ಬೈಕ್ ಸವಾರ, ನಾಗರಾಜ್ ಎಂಬುವವರಿಗೆ ಗಾಯಗಳಾಗಿದ್ದು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗಣೇಶ್ ಮತ್ತು ನಾಗರಾಜ್ ಬೆಂಗಳೂರಿನ ಲಗ್ಗೆರೆ ನಿವಾಸಿಗಳಾಗಿದ್ದು ಬೈಕ್ ನಲ್ಲಿ ಮಲೇ ಮಹದೇಶ್ವರ ಬೆಟ್ಟಕ್ಕೆ ತೆರಳಿ ವಾಪಸ್ ಆಗುತ್ತಿದ್ದರು. ಈ ವೇಳೆ ಲಾರಿ ಬೈಕ್ ಗೆ ಡಿಕ್ಕಿಯಾಗಿ ಈ ಘಟನೆ ನಡೆದಿದೆ. ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Biker, death, hit-and-run, Chamaraj nagar