ಬೆಂಗಳೂರು, ಜನವರಿ 23,2026 (www.justkannada.in): ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಹೌದು, ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರ್ಕಾರ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಬೈಕ್ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಆ ಅರ್ಜಿಗಳನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ನ್ಯಾಯಪೀಠವು ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಬೈಕ್ ಟ್ಯಾಕ್ಸಿ ಸೇವೆಗಳು ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಒಂದು ಭಾಗವಾಗಿದ್ದು, ಕಾನೂನು ಚೌಕಟ್ಟಿನೊಳಗೆ ಅವುಗಳನ್ನು ನಿರ್ಬಂಧಿಸುವಂತಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.
Key words: High Court, gives, green signal , bike taxis







