ಜನಾರ್ಧನ ರೆಡ್ಡಿಗೆ ಸೇರಿದ ಮಾಡೆಲ್ ಹೌಸ್ ಗೆ ಬೆಂಕಿ: 8 ಮಂದಿ ಪೊಲೀಸರ ವಶಕ್ಕೆ

ಬಳ್ಳಾರಿ,ಜನವರಿ,24,2026 (www.justkannada.in): ಮಾಜಿ ಸಚಿವ, ಶಾಸಕ ಜನಾರ್ದನ ರೆಡ್ಡಿಗೆ  ಸೇರಿದ ಮಾಡೆಲ್‌ ಹೌಸ್‌ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಮಾಡೆಲ್ ಹೌಸ್ ಗೆ ಬೆಂಕಿ ಹಿನ್ನೆಲೆಯಲ್ಲಿ ಸುಮಾರು  1.25 ಕೋಟಿ ರೂ. ನಷ್ಟವಾಗಿದೆ ಎಂದು ಜಿ ಸ್ಕ್ವೇರ್‌ ಬಡಾವಣೆಯ ಸೈಟ್‌ ಎಂಜಿನಿಯರ್‌ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದನ್ನು ಆಧರಿಸಿ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 6 ಅಪ್ರಾಪ್ತರು ಸೇರಿ ಒಟ್ಟು 8 ಜನರನ್ನು ಬಳ್ಳಾರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಬಳ್ಳಾರಿ ವಲಯ ಐಜಿಪಿ ಡಾ. ಪಿ.ಎಸ್‌ ಹರ್ಷ ‘ಅಗ್ನಿ ಅವಘಡದ ಪ್ರಕರಣ ಸಂಬಂಧ  ಒಟ್ಟು 8 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಇದರಲ್ಲಿ ಕೆಲವರು ಅಪ್ರಾಪ್ತರಿದ್ದಾರೆ. ಅವರ ವಯಸ್ಸಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ. ವಿಚಾರಣೆ ಪೂರ್ಣಗೊಂಡ ಬಳಿಕ ಇತರ ಮಾಹಿತಿಯನ್ನು ತಿಳಿಸಲಾಗುವುದು’ ಎಂದು ಹೇಳಿದ್ದಾರೆ.

Key words: Fire, model house, Janardhana Reddy