ಗಣರಾಜ್ಯೋತ್ಸವ: ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ಒತ್ತಾಯ

ಮೈಸೂರು,ಜನವರಿ,24,2026 (www.justkannada.in):  ಜನವರಿ 26 ದೇಶಾದ್ಯಂತ ಗಣರಾಜ್ಯೋತ್ಸವದ ಸಂಭ್ರಮವಾಗಿದ್ದು, ಆ ದಿನದಂದು ಮೈಸೂರು ಜಿಲ್ಲೆಯ ಸರಕಾರಿ ಕಚೇರಿಯಲ್ಲಿ, ಶಾಲಾ, ಕಾಲೇಜುಗಳಲ್ಲಿ ಹಾಗೂ ಖಾಸಗಿ ಬ್ಯಾಂಕ್ ಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪೂಜೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಯುವ ಭಾರತ ಸಂಘಟನೆಯ ಸಂಚಾಲಕ ಜೋಗಿ ಮಂಜು ಒತ್ತಾಯಿಸಿದ್ದಾರೆ.

ಈ ಕುರಿತು  ಪತ್ರಿಕೆ ಹೇಳಿಕೆ ನೀಡಿರುವ ಜೋಗಿ ಮಂಜು ಅವರು,  ಹೋರಾಟದಲ್ಲಿ ಭಾಗಿಯಾಗಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹಾಗೂ ದೇಶಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟು, ವೀರಮರಣವನ್ನಪ್ಪಿದ ದೇಶಭಕ್ತರಾಗಿದ್ದಾರೆ. ಅವರ ತ್ಯಾಗದ ಕುರಿತು ಮುಂದಿನ ಪೀಳಿಗೆಗೆ ತಿಳಿಸಿಕೊಡುವ ನಿಟ್ಟಿನಲ್ಲಿ ಮತ್ತು ಅವರ ತ್ಯಾಗ ಬಲಿದಾನ ನೆನಪಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ.

ಹೀಗಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸುವಂತೆ ಕಳೆದ ನಾಲ್ಕು ವರ್ಷಗಳ ಹಿಂದೆಯೇ ಆದೇಶವಾಗಿದ್ದು, ಇದನ್ನು ಅನುಪಾಲನೆ ಮಾಡಲು ಕ್ರಮ ವಹಿಸಬೇಕು ಎಂದು ಜೋಗಿ ಮಂಜು ಆಗ್ರಹಿಸಿದ್ದಾರೆ.

Key words: Republic Day,  Demand, worship, Sangolli Rayanna, Mysore