ಪೌರಾಯುಕ್ತೆಗೆ ಜೀವ ಬೆದರಿಕೆ ಕೇಸ್: ರಾಜೀವ್ ಗೌಡ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಚಿಕ್ಕಬಳ್ಳಾಪುರ,ಜನವರಿ,24,2026 (www.justkannada.in):  ನಗರಸಭೆ ಪೌರಾಯುಕ್ತೆ ಅಮೃತಾಗೌಡರಿಗೆ  ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಚಿಂತಾಮಣಿ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.

ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಚಿಂತಾಮಣಿಯ 2ನೇ ಹೆಚ್ಚುವ ಸೆಷನ್ಸ್ ನ್ಯಾಯಾಲಯ, ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿ, ಅರ್ಜಿ ವಜಾಗೊಳಿಸಿದೆ. ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ನಗರಸಭೆ ಪೌರಾಯುಕ್ತೆ ಅಮೃತಾ ಗೌಡಗೆ ಕರೆ ಮಾಡಿ ರಾಜೀವ್ ಗೌಡ ಜೀವ ಬೆದರಿಕೆ ಹಾಕಿದ್ದರು. ಈ ಕುರಿತು ಆಡಿಯೋ ವೈರಲ್ ಆಗಿ ರಾಜೀವ್ ಗೌಡ ವಿರುದ್ದ ಕ್ರಮಕ್ಕೆ ಆಗ್ರಹ ಕೇಳಿ ಬಂದಿತ್ತು. ಈ ಕುರಿತು ರಾಜೀವ್ ಗೌಡ ವಿರುದ್ಧ ಪೌರಾಯುಕ್ತೆ ಅಮೃತಾಗೌಡ ಅವರು ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜೀವ್ ಗೌಡ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ನಿನ್ನೆ  ಎಫ್ ಐಆರ್ ರದ್ದು ಕೋರಿ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.

Key words: Life threat, case, Rajeev Gowda, anticipatory bail, plea, dismissed