ನವದೆಹಲಿ,ಜನವರಿ,26,2026 (www.justkannada.in): ಇಂದು ದೇಶಾದ್ಯಂತ 77ನೇ ಗಣರಾಜ್ಯೋತ್ಸವದ ಸಂಭ್ರಮವಾಗಿದ್ದು ಕೆಂಪುಕೋಟೆಯಲ್ಲಿ ಸಂಭ್ರಮ ಕಳೆಗಟ್ಟಿದೆ.
ಗಣರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸಮರ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮ ಯೋಧರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಪ್ರಧಾನಿ ಮೋದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾಥ್ ನೀಡಿದರು.
ಕರ್ತವ್ಯ ಪಥಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದು ಧ್ವಜಾರೋಹಣ ನೆರವೇರಿಸಲಿದ್ದಾರೆ.
Key words: 77th Republic Day, celebrations, PM Modi, martyrs, memorial







