77ನೇ ಗಣರಾಜ್ಯೋತ್ಸವ: ರಾಷ್ಟ್ರಪತಿಗಳಿಂದ ಧ್ವಜಾರೋಹಣ, ಸ್ತಬ್ದಚಿತ್ರಗಳ ಪ್ರದರ್ಶನ, ಸೇನಾಶಕ್ತಿ ಅನಾವರಣ.

ನವದೆಹಲಿ,ಜನವರಿ,26,2026 (www.justkannada.in): ದೇಶದಲ್ಲಿ  77ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಅಂಗವಾಗಿ  ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ವೇಳೆ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾಥ್‌ ನೀಡಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಯುರೋಪಿಯನ್ ಕಮಿಷನ್‌ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್‌ನ್ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೋ ಕೋಸ್ಟಾ ಮುಖ್ಯ ಭಾಗವಹಿಸಿದ್ದಾರೆ.

ಧ್ವಜಾರೋಹಣದ ಬೆನ್ನಲ್ಲೇ ರಾಷ್ಟ್ರಪತಿಗಳಿಗೆ 21 ತೋಪಿನ ಸನ್ಮಾನ ನೀಡಿ ಗೌರವಿಸಲಾಯಿತು. ಬಳಿಕ ಗಣರಾಜ್ಯೋತ್ಸವದ ಪರೇಡ್‌ ಆರಂಭವಾಯಿತು. ಮೆರವಣಿಗೆಯಲ್ಲಿ ಸೇನಾಶಕ್ತಿ ಅನಾವರಣಗೊಳ್ಳುತ್ತಿದ್ದು ಸ್ತಬ್ದಚಿತ್ರಗಳ ಪ್ರದರ್ಶನ ಎಲ್ಲರ ಮನ ಸೆಳೆಯುತ್ತಿ.

ಕ್ಷಿಪಣಿ ಸೇನಾ ಟ್ಯಾಂಕರ್ ಯುದ್ದ ವಿಮಾನಗಳ ಪ್ರದರ್ಶನ ಸ್ವದೇಶಿ ನಿರ್ಮಿತ ಶಸ್ತ್ರಾಸ್ತ್ರಗಳ ಪ್ರದರ್ಶನ ಗಡಿ ಭದ್ರತಾ ಪಡೆಯ ಒಂಟಿ ದಳದ ಪಥ ಸಂಚಲನ  ಸೇನೆಯ ಅಪರೇಷನ್ ಸಿಂಧೂರ ಕಾರ್ಯಾಚರಣೆ ಪ್ರದರ್ಶನವಾಗಿದೆ.  3 ಹೊಸ ಕ್ರಿಮಿನಲ್ ಕಾನೂನುಗಳ ಸ್ತಬ್ದಚಿತ್ರಗಳು ಸೇರಿ ಹಲವು ಸ್ತಬ್ದಚಿತ್ರಗಳು ಪ್ರದರ್ಶನವಾಗುತ್ತಿದೆ.

Key words: 77th Republic Day, Flag hoisting, President,