ಜಂಟಿ ಅಧಿವೇಶನದಲ್ಲಿ ‘ಕೈ’ ಶಾಸಕರ ಅಡ್ಡಿ:  ರಾಷ್ಟ್ರಪತಿಗಳಿಗೆ ವರದಿ ನೀಡಿದ ರಾಜ್ಯಪಾಲರು

ಬೆಂಗಳೂರು,ಜನವರಿ,26,2026 (www.justkannada.in):  ರಾಜ್ಯ ವಿಧಾನಮಂಡಲ ಅಧಿವೇಶನ ಉದ್ದೇಶಿಸಿ ಒಂದೇ ಸಾಲಿನಲ್ಲಿ ಭಾಷಣ ಮುಗಿಸಿದ್ದಕ್ಕೆ ಕಾಂಗ್ರೆಸ್ ಶಾಸಕರು ಅಡ್ಡಿಪಡಿಸಿ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವರದಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆ ಸಂಬಂಧ ವರದಿಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಲವು ವಿಚಾರಗಳನ್ನ ಉಲ್ಲೇಖಿಸಿದ್ದಾರೆ. ರಾಷ್ಟ್ರಪತಿಗಳು ಅಗೀಕರಿಸಿದ್ದ ಕಾನೂನನ್ನೇ  ಟೀಕೆ ಮಾಡಿದರು. ಹೀಗಾಗಿ ಭಾಷಣ ಪರಿಷ್ಕರಿಸುವಂತೆ ಸೂಚನೆ ನೀಡಲಾಗಿತ್ತು.  ಆದರೂ ಭಾಷಣ ಮಾಡವಂತೆ ಒತ್ತಡ ಹೇರಲು ಕಾಂಗ್ರೆಸ್ ಸದಸ್ಯರು ಪ್ರಯತ್ನ ಮಾಡಿದರು.

ಭಾಷಣ ಮುಗಿಸಿ ತೆರಳುತ್ತಿದ್ದಾಗ ಕಾಂಗ್ರೆಸ್ ಸದಸ್ಯರು ನನಗೆ ಮುತ್ತಿಗೆ ಹಾಕಿದರು. ಈ ಮೂಲಕ ನನ್ನ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ಸದಸ್ಯರು ಪ್ರಯತ್ನಿಸಿದರು. ನನ್ನ ವಿರುದ್ದ  ಘೋಷಣೆ ಕೂಗಿದರು. ಜೀ ರಾಮ್ ಜೀ ಕಾಯ್ದೆ ವಿರುದ್ದ ಧಿಕ್ಕಾರ ಕೂಗಿದರು. ನಾನು ಸಂವಿಧಾನ ಬದ್ಧವಾಗಿ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ರಾಜ್ಯಪಾಲರು ಘಟನೆ ಸಹಿತ ವಿವರ ನೀಡಿದ್ದಾರೆ ಎನ್ನಲಾಗಿದೆ.

Key words:  Governor, reports, President, congress, MLAs, joint session