ಬೆಂಗಳೂರು,ಜನವರಿ,27,2026 (www.justkannada.in): ದುರುದ್ದೇಶದಿಂದ ಮನ್ ರೇಗಾ ಹೆಸರು ಬದಲಾವಣೆ ಮಾಡಿ ‘ವಿಬಿ ಜೀ ರಾಮ್ ಜೀ’ ಜಾರಿ ಮಾಡಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರ ಮನ್ ರೇಗಾ ಯೋಜನೆಯ ಹೆಸರನ್ನ ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿರುವುದನ್ನ ವಿರೋಧಿಸಿ ಕಾಂಗ್ರೆಸ್ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮನ್ ರೇಗಾ ಯೋಜನೆಯಲ್ಲಿ ರಾಮ ಅನ್ನೋ ಹೆಸರು ಬರುವ ರೀತಿ ಯೋಜನೆ ಮಾಡಿದ್ದಾರೆ. ದಶರಥ ರಾಮ ಇಲ್ಲ ಕೌಶಲ್ಯ ರಾಮ ಇಲ್ಲ ಸೀತಾ ರಾಮ ಸಹ ಇಲ್ಲ. ಈ ಕಾಯ್ದೆಯಲ್ಲಿ ರಾಮ ಇಲ್ಲ ಬಡವರು ದಲಿತರು, ರೈತರ ಬಗ್ಗೆ ಚಿಂತಿಸುವುದು ಕಾಂಗ್ರೆಸ್ ಮಾತ್ರ. ಬಡವರ ಬಗ್ಗೆ ಮಾತಾಡುವುದು ಕಾಂಗ್ರೆಸ್ ಮಾತ್ರ. ಬಡವರ ಕಾರ್ಯಕ್ರಮಗಳನ್ನ ಬಿಜೆಪಿಯವರು ರದ್ದು ಮಾಡಿದ್ದಾರೆ ಇದಕ್ಕೆ ಆರ್ ಎಸ್ ಎಸ್ ನವರು ಮಾರ್ಗದರ್ಶನ ಮಾಡುತ್ತಾರೆ. ಆರ್ ಎಸ್ ಎಸ್ ನವರಿಗೆ ಬಡವರು ಸೇವಕರಾಗಿಯೇ ಇರಬೇಕು ಎಂದು ಕಿಡಿಕಾರಿದರು.
Key words: CM Siddaramaiah, congress, protest, Central government







