ಬೊಲೆರೊ ಜೀಪ್ ಗಳನ್ನು  ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಸಂಸದ ಡಾ.ಸಿ.ಎನ್ ಮಂಜುನಾಥ್

ರಾಮನಗರ,ಜನವರಿ,27,2026 (www.justkannada.in): ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ. ಎನ್. ಮಂಜುನಾಥ್ ಅವರು ಇಂದು ಸಿಎಸ್ ಆರ್ ಯೋಜನೆಯಡಿಯಲ್ಲಿ ಎರಡು ಬೊಲೆರೊ(BOLERO) ಜೀಪ್ ಗಳನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಿದರು.

ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಸಂಸದ ಡಾ. ಸಿ. ಎನ್. ಮಂಜುನಾಥ್ ಅವರ ಸಹಕಾರ ಹಾಗೂ ಕೋರಿಕೆ  ಮೇರೆಗೆ, ಸಾಮಾಜಿಕ ಹೊಣೆಗಾರಿಕೆ ಕಾರ್ಯನೀತಿ (CSR) ಯೋಜನೆಯಡಿ ಡಿಸ್ಕವರಿ ವಿಲೇಜ್ ಸಂಸ್ಥೆ ವತಿಯಿಂದ- ಅರಣ್ಯ ಉಪ ಸಂರಕ್ಷಣಾ ಪ್ರಾದೇಶಿಕ ವಿಭಾಗ, ರಾಮನಗರ ಹಾಗೂ ಕಾವೇರಿ ಅರಣ್ಯ ವನ್ಯಜೀವಿ ಉಪ ಸಂರಕ್ಷಣಾ ವಿಭಾಗ, ಕೊಳ್ಳೇಗಾಲ. ಇವರಿಗೆ ಎರಡು ಬೊಲೆರೊ ಜೀಪ್ ಗಳನ್ನು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಹಸ್ತಾಂತರ ಬಳಿಕ ಮಾತನಾಡಿದ  ಸಂಸದ ಡಾ.ಸಿ.ಎನ್ ಮಂಜುನಾಥ್, ಅರಣ್ಯ ಇಲಾಖೆಯ ಎರಡೂ ವಿಭಾಗಗಳು ಈ ವಾಹನಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಾರ್ವಜನಿಕರಿಗೆ ಹಾಗೂ ರೈತರಿಗೆ ಅಗತ್ಯವಿರುವ ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಈ ವಾಹನಗಳು ಅರಣ್ಯ ಸಂರಕ್ಷಣೆ, ಜನಸಾಮಾನ್ಯರ ಸಹಾಯ ಹಾಗೂ ರೈತರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಬೇಕೆಂದು ಅವರು ಆಶಯ ವ್ಯಕ್ತಪಡಿಸಿದರು.

ಇದೆ ಸಂದರ್ಭದಲ್ಲಿ, ಸಿಎಸ್ ಆರ್ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಮಹತ್ವದ ಕೊಡುಗೆ ನೀಡಿದ ಡಿಸ್ಕವರಿ ವಿಲೇಜ್ ಸಂಸ್ಥೆಯ ಸಹ ಸಂಸ್ಥಾಪಕ ಪ್ರಶಾಂತ್ ಪ್ರಕಾಶ್ ಅ ವರ ಸೇವೆಯನ್ನು ಸ್ಮರಿಸಿ ಸಾಮಾಜಿಕ ಬದ್ಧತೆ ಹಾಗೂ ಸೇವಾ ಮನೋಭಾವವನ್ನು ಪ್ರಶಂಸಿಸಿದರು.

ಈ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಯಶವಂತ ಗುರುಕ್ಕರ್ , ಬಿಜೆಪಿ ಜಿಲ್ಲಾ ಅಧ್ಯಕ್ಷ ಆನಂದ್ ಸ್ವಾಮಿ  ಜೆಡಿಎಸ್ ಮುಖಂಡ ಸಬ್ಬಕೆರೆ ಶಿವಲಿಂಗಯ್ಯ  ಅವರು, ಬಿಜೆಪಿ ಮುಖಂಡ ಗೌತಮ್ ಗೌಡ  , ಪ್ರಸಾದ್ ಗೌಡ  ಸೇರಿದಂತೆ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Key words: MP ,Dr. C.N. Manjunath, hands over, Bolero jeeps , Forest Department