ಬೆಂಗಳೂರು,ಜನವರಿ,28,2026 (www.justkannada.in): ಸೇವೆಯಲ್ಲಿರುವಾಗಲೇ ಅಪಘಾತದಿಂದ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ ನಿಧನರಾದ ಹಿನ್ನೆಲೆಯಲ್ಲಿ ಅವರ ಪುತ್ರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಹುದ್ದೆ ನೀಡಲಾಗಿದೆ.
ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯಾ ಎಮ್ ಬೀಳಗಿ ಅವರನ್ನು ಕರ್ನಾಟಕ ಸರ್ಕಾರ ಸಚಿವಾಲಯದ ಸಹಾಯಕ ಹುದ್ದೆಗೆ ಅನುಕಂಪದ ಆಧಾರದ ಮೇಲೆ ನೇಮಕ ಮಾಡಲಾಗಿದೆ.
ಮಹಾಂತೇಶ್ ಬೀಳಗಿ ಅವರು ಸೇವೆಯಲ್ಲಿರುವಾಗಲೇ ದಿನಾಂಕ:25.11.2025ರಂದು ಕಾರು ಅಪಘಾತದಲ್ಲಿ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಇವರ ಪುತ್ರಿ ಚೈತನ್ಯಾ ಎಮ್ ಬೀಳಗಿ, ಅವರನ್ನು ಕರ್ನಾಟಕ ನಾಗರೀಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996ರ ನಿಯಮ 6(1)ರನ್ವಯ ಕರ್ನಾಟಕ ಸರ್ಕಾರ ಸಚಿವಾಲಯದಲ್ಲಿನ, ವೇತನ ಶ್ರೇಣಿ 49050-1250-52800-1375-58300-1500-64300-1650-74200-1900-85600-2300-925000ರಲ್ಲಿ ಸಹಾಯಕ ಹುದ್ದೆಗೆ ಎರಡು ವರ್ಷಗಳ ಪರೀಕ್ಷಾರ್ಥಾವಧಿಯ ಮೇರೆಗೆ ವರ್ಷಗಳ ಪರೀಕ್ಷಾರ್ಥಾವಧಿಯ ಮೇರೆಗೆ ಹಾಗೂ ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಅನುಕಂಪದ ಆಧಾರದ ಮೇಲೆ ನೇಮಕ ಮಾಡಲಾಗಿದೆ.
Key words: IAS officer, D. Mahantesh Bilagi, daughter, compassionate job







