ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವು- ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು,ಜನವರಿ,28,2026 (www.justkannada.in):  ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ  ಸಾವು ಆಘಾತಕಾರಿ. ಅವರ ಸಾವಿನ ಸುದ್ದಿ ಕೇಳಿ ನನಗೂ ಗಾಬರಿಯಾಯಿತು ಎಂದು ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, , ಅತ್ಯಂತ ಪ್ರಗತಿಪರ ಆಲೋಚನೆ ಹೊಂದಿದ್ದಂತಹ ನಾಯಕ ಅಜಿತ್ ಪವಾರ್ ಅವರು. ಎಲ್ಲಾ ಕೆಲಸಗಳಿಗೂ ಸಹಕಾರ ಕೊಡುತ್ತಿದ್ದಾರೆ ಎಂದು ಮೊನ್ನೆಯಷ್ಟೇ ಮಹಾರಾಷ್ಟ್ರ  ಸಿಎಂ ಹೇಳಿದ್ದರು. ಅವರ ಆತ್ಮಕ್ಕೆ ಶಾಂತಿಸಿಗಲಿ. ಅವರ ಕುಟುಂಬ ವರ್ಗ ಹಾಗೂ ಬೆಂಬಲಿಗರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದರು.

ರಾಜಕಾರಣಿಗಳಾದ ನಾವುಗಳು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಆಚೀಚೆ ಪ್ರಯಾಣ ಮಾಡುವಾಗ ಹುಷಾರಾಗಿ ಇರಬೇಕು. ಹೀಗೆ ಅನೇಕ ನಾಯಕರನ್ನು ನಾವು ಕಳೆದುಕೊಂಡಿದ್ದೇವೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

Key words: Ajit Pawar, dies, DCM, DK Shivakumar, condoles