ಬೆಂಗಳೂರು,ಜನವರಿ,28,2026 (www.justkannada.in): ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅಂಗೀಕರಿಸಿದ್ದು ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಲು ದೂರುದಾರ ಸ್ನೇಹಮಯಿ ಕೃಷ್ಣ ನಿರ್ಧರಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸ್ನೇಹಮಯಿ ಕೃಷ್ಣ, ಇದು ತಾತ್ಕಾಲಿಕ ರಿಲೀಫ್ ಅಷ್ಟೆ ಆರೋಪಿಗಳು ತಪ್ಪಿಸಿಕೊಳ್ಳಲು ಬಿಡಲ್ಲ ಸದ್ಯ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ. ಯಾವ ಗ್ರೌಂಡ್ ಮೇಲೆ ಬಿ ರಿಪೋರ್ಟ್ ಅಂಗೀಕರಿಸಿದೆ ಎಂದು ಕೋರ್ಟ್ ಆದೇಶದ ಪ್ರತಿ ನೋಡಿದ ಬಳಿಕ ಗೊತ್ತಾಗುತ್ತದೆ ಎಂದರು.
ಅಲ್ಲದೆ ಬಿ ರಿಪೋರ್ಟ್ ಅಂಗೀಕಾರ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದೇನೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.
Key words: Muda Case, B Report, Snehamai Krishna, High Court







