ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

ಬೆಂಗಳೂರು,ಜನವರಿ,29,2026 (www.justkannada.in):  ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆಜೆ ಜಾರ್ಜ್ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಲು ಮುಂದಾಗಿದ್ದರು ಎಂಬ ಸುದ್ದಿ  ಹರಿದಾಡುತ್ತಿದ್ದು ಈ ವಿಚಾರದ ಬಗ್ಗೆ ಸ್ವತಃ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.

ಇಂದಿನ ಇಲಾಖೆಯಲ್ಲಿ ಸಿಎಂ  ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ಕುರಿತು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸುನಿಲ್ ಕುಮಾರ್ ಪ್ರಸ್ತಾಪಿಸಿದರು.  ಸುನಿಲ್ ಕುಮಾರ್ ಇದೇ ವಿಚಾರವನ್ನು ಸ್ಪೀಕರ್ ಯುಟಿ ಖಾದರ್ ಅವರ ಗಮನಕ್ಕೆ ತಂದರು.  ಇದಕ್ಕೆ ಸ್ಪಷ್ಟನೆ ನೀಡಿರುವ ಸಚಿವ ಕೆಜಿ ಜಾರ್ಜ್ ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸಿಲ್ಲ. ಅದು ಸತ್ಯಕ್ಕೆ ದೂರ ಎಂದಿದ್ದಾರೆ.

ನನ್ನ ಸಂಪೂರ್ಣ ಬೆಂಬಲ ಸಿಎಂ ಸಿದ್ದರಾಮಯ್ಯಗೆ ಇದೆ.  ನಿನ್ನೆ ಸಹ  ಸಿಎಲ್ ಪಿ ಮೀಟಿಂಗ್ ಇತ್ತು. ನನಗೆ ಗೊತ್ತಿಲ್ಲದ ವಿಚಾರ ಕೇಳಿದರೆ ನಾನು ಏನು ಹೇಳಲಿ? ರಾಜೀನಾಮೆ ವಿಚಾರ ಸತ್ಯಕ್ಕೆ ದೂರವಾದ ಮಾತು. ಮಾಧ್ಯಮಗಳು ಇಂತಹ ಸುದ್ದಿಗಳನ್ನು ಅವರೇ ಸೃಷ್ಟಿ ಮಾಡುತ್ತಿದ್ದಾರೆ ಎಂದು ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.

Key words: I am, not , resign, Minister, KJ George