ವಿಧಾನಮಂಡಲದ ಜಂಟಿ ಅಧಿವೇಶನ ಫೆ.4ರವರೆಗೆ ವಿಸ್ತರಣೆ

ಬೆಂಗಳೂರು,ಜನವರಿ,29,2026 (www.justkannada.in):  ರಾಜ್ಯದಲ್ಲಿ ನಡೆಯುತ್ತಿರುವ ಜಂಟಿ ವಿಶೇಷ ವಿಧಾನಮಂಡಲದ ಅಧಿವೇಶನವನ್ನು ಫೆಬ್ರವರಿ 4ರವರೆಗೆ ವಿಸ್ತರಣೆ ಮಾಡಲಾಗಿದೆ.

ಇಂದು ವಿಧಾನಸೌಧದಲ್ಲಿ ವಿಧಾನಸಭೆ ಕಾರ್ಯಕಲಾಪ ಸಲಹಾ ಸಮಿತಿಯ ಸಭೆ ನಡೆದಿದ್ದು,  . ಫೆಬ್ರವರಿ.4ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ಜನವರಿ 31ರವರೆಗೆ ವಿಧಾನಮಂಡಲ ಅಧಿವೇಶನ ಕೊಲಗೊಳ್ಳುತ್ತಿತ್ತು.

ಸಭೆಯಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್, ಸಿಎಂ ಸಿದ್ಧರಾಮಯ್ಯ, ಸಂಸದೀಯ ವ್ಯವಹಾರ ಸಚಿವ ಹೆಚ್.ಕೆ ಪಾಟೀಲ್, ವಿಪಕ್ಷ ನಾಯಕ ಆರ್.ಅಶೋಕ್, ಸಚಿವ ಕೆ.ಜೆ ಜಾರ್ಜ್ ಸೇರಿ ಹಲವು ಪ್ರಮುಖರು ಭಾಗಿಯಾಗಿದ್ದರು.

Key words: Joint session, extended, till, Feb. 4