ಮೈಸೂರು,ಜನವರಿ,30,2026 (www.justkannada.in): ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯದಿಂದ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ 50,000 ದಂಡ ವಿಧಿಸಿ ಮೈಸೂರು 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ.
ಮೈಸೂರು ನಗರದ ಉದಯಗಿರಿ ಪೊಲೀಸ್ ಠಾಣಾ ಮೊ.ಸಂ 46/2023 NDPS ಪ್ರಕರಣದಲ್ಲಿ ಆರೋಪಿಗಳಾದ ರಾಜೀವ್ ನಗರ ನಗರದ ಮುದಸೀರ್ ಅಹಮದ್(37), ಮೊಹಮ್ಮದ್ ಇಮ್ರಾನ್ @ ಬಬನ್ ಅಮೀರ್ ಬಿನ್(38) ಗೆ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಪ್ರಕರಣದಲ್ಲಿ ಮೈಸೂರು 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಕಾರಾಗೃಹ ವಾಸ ಮತ್ತು ತಲಾ 50,000 ದಂಡ ವಿಧಿಸಿ ಶಿಕ್ಷೆ ಪ್ರಕಟಿಸಿದೆ. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚಿನ 1 ವರ್ಷ ಹೆಚ್ಚಿನ ಕಾರಾಗೃಹ ವಾಸ ವಿಧಿಸಿ ಆದೇಶಿಸಿದೆ.
ಸದರಿ ಪ್ರಕರಣದ ತನಿಖೆಯನ್ನು ಉದಯಗಿರಿ ಪೊಲೀಸ್ ಇನ್ಸ್ ಪೆಕ್ಟರ್ ಸುಧಾಕರ್.ಕೆ.ಎನ್ ಅವರು ನಡೆಸಿದ್ದು, ನ್ಯಾಯಾಲಯದಲ್ಲಿ ಪ್ರಕರಣವನ್ನು ಸರ್ಕಾರಿ ಅಭಿಯೋಜಕರಾದ ಎನ್.ಬಿ.ವಿಜಯಲಕ್ಷ್ಮಿ ಅವರು ನಡೆಸಿದರು.
Key words: Drugs case, Two accused, sentenced, imprisonment, fine







