ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮೆನ್ ಸಿ.ಜೆ.ರಾಯ್ ಆತ್ಮಹತ್ಯೆಗೆ ಶರಣು

ಬೆಂಗಳೂರು,ಜನವರಿ,30,2026 (www.justkannada.in):  ಪ್ರತಿಷ್ಠಿತ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ಪಿಸ್ತೂಲ್ ನಿಂದ  ಗುಂಡು ಹಾರಿಸಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾನ್ಫಿಡೆಂಟ್ ಗ್ರೂಪ್ ಹಾಗೂ ಸಿ.ಜೆ.ರಾಯ್ ಅವರ ಮನೆ ಮೇಲೆ ಪದೇ ಪದೇ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದರು. ಇಂದು ಕೂಡ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು,  ಐಟಿ ದಾಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದ ಹೊತ್ತಲ್ಲೇ ಸಿ.ಜೆ.ರಾಯ್ ಶೂಟ್ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಶೋಕ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Key words: Confident Group Chairman, C.J. Roy,  suicide