ಸಿಜೆ ರಾಯ್ ಆತ್ಮಹತ್ಯೆ ಕೇಸ್: ಕೇಂದ್ರಕ್ಕೆ ಕೇರಳ ಸಿಎಂ ಪತ್ರ

ಬೆಂಗಳೂರು, ಫೆಬ್ರವರಿ, 2,2026 (www.justkannada.in): ಕಾನ್ಫಿಡೆಂಟ್ ಗ್ರೂಪ್‌  ಸಂಸ್ಥಾಪಕ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇರಳ ಸಿಎಂ ಪಿಣರಾಯಿ ವಿಜಯನ್ ಎಂಟ್ರಿ ಆಗಿದ್ದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ.

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನಲ್ಲಿ ಉದ್ಯಮಿ ಸಿಜೆ ರಾಯ್​ ಸಾವಿನ ಬಗ್ಗೆ ಸೂಕ್ತ ತನಿಖೆಯ ಅಗತ್ಯವಿದೆ. ಉದ್ಯಮಿ ಸಿಜೆ ರಾಯ್ ಸಾವು ಹಲವು ಉದ್ಯಮಿಗಳಲ್ಲಿ ಆತಂಕ ಹುಟ್ಟಿಸಿದೆ. ಈ ಘಟನೆ ನಡೆಯುವ ವೇಳೆ ಐಟಿ ಅಧಿಕಾರಿಗಳು ಪರಿಶೀಲನೆ ನಡೆಯುತ್ತಿತ್ತು. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಾಂಗ ತನಿಖೆ ನಡೆಸಬೇಕು ಮನವಿ ಮಾಡಿದ್ದಾರೆ .

ಈ ಘಟನೆ ದೇಶದ ತೆರಿಗೆ ಆಡಳಿತ ಮೇಲಿನ ಕಪ್ಪು ಕಲೆಯಂತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಯಲಿ ಎಂದು ಕೇರಳ ಸಿಎಂ ಪಿಣರಾಯಿ ಅವರು ಆಗ್ರಹಿಸಿದ್ದಾರೆ.

Key words: CJ Roy, suicide case, Kerala CM, letter, Union Minister