ಬೆಂಗಳೂರು,ಫೆಬ್ರವರಿ,3,2026 (www.justkannada.in): ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾಂಗ್ರೆಸ್ ಎಂಎಲ್ ಸಿ ನಜೀರ್ ಅಹ್ಮದ್ ಕ್ಷಮೆ ಕೇಳುವಂತೆ ಆಗ್ರಹಿಸಿ ವಿಧಾನಪರಿಷತ್ ನಲ್ಲಿ ಬಿಜೆಪಿ ಪಟ್ಟು ಹಿಡಿಯಿತು.
ಪ್ರಧಾನಿ ನರೇಂದ್ರ ಮೋದಿ ಬಗ್ಗೆ ನಜೀರ್ ಅಹ್ಮದ್ ಆಕ್ಷೇಪಾರ್ಹ ಹೇಳಿಕೆ ವಿಚಾರ ವಿಧಾನ ಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು ಕ್ಷಮೆ ಕೇಳುವಂತೆ ಬಿಜೆಪಿ ಸದಸ್ಯರು ಒತ್ತಾಯಿಸಿದರು. ಸದನದಲ್ಲಿ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಸದನವನ್ನ 5 ನಿಮಿಷಗಳ ಕಾಲ ಮುಂದೂಡಿಕೆ ಮಾಡಿದರು.
ಈ ವೇಳೆ ಮಾತನಾಡಿದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ನಜೀರ್ ಕ್ಷಮೆ ಕೇಳಬೇಕು ಇಲ್ಲದಿದ್ದರೆ ಅವರನ್ನ ಹೊರಗೆ ಹಾಕಿ. ಮೋದಿ ಬಗ್ಗೆ ಮಾತನಾಡಿದ್ದಾರೆ. ಮುಂದೆ ರಾಷ್ಟ್ರಪತಿ ಬಗ್ಗೆ ಮಾತನಾಡುತ್ತಾರೆ. ವಿಶ್ಲೇಷಣೆ ಬೇಡ ಕ್ಷಮೆ ಕೇಳಬೇಕು ಇಲ್ಲದಿದ್ದರೆ ಹೊರಗೆ ಹಾಕಿ ಎಂದು ಆಗ್ರಹಿಸಿದರು.
Key words: Objectionable, statement, PM Modi, Nazir, Legislative council







