Sunday, September 20, 2026

BDA Apartments

ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ BDA JK_Adv BDA Adv
Home Crime ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ

ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ

ಬೆಂಗಳೂರು,ಫೆಬ್ರವರಿ,5,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಷ್ಟ್ರಾದ್ಯಂತ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಲೇ ಇವೆ. ಈ ಮಧ್ಯೆ  ಇದೀಗ ನಗರದ ಶಾಂತಿನಗರದಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ.

ಅನಾಮಧೇಯ ವ್ಯಕ್ತಿಯೊಬ್ಬ ಇಟಲಿಯ ಕಾನ್ಸುಲ್ ಜನರಲ್ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಮೇಲ್ ಮಾಡಿದ್ದಾನೆ. ರಾಯಭಾರಿ ಕಚೇರಿಯ ಇಮೇಲ್ ಗೆ ಈ ಬೆದರಿಕೆ ಬಂದಿದೆ ಎಂದು ತಿಳಿದುಬಂದಿದೆ.

ಕಚೇರಿ ಆವರಣದಲ್ಲಿ 5 ಆರ್ ಡಿ ಎಕ್ಸ್ ಬಾಂವ್ ಸ್ಪೋಟಿಸುವುದಾಗಿ ಅಪರಿಚಿತ ವ್ಯಕ್ತಿ ಇಮೇಲ್ ಮೂಲಕ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಬಾಂಬ್ ಪತ್ತೆ ದಳ (BDDS) ಇಡೀ ಪ್ರದೇಶದಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ .ಕಚೇರಿಯ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ, ಶೋಧ ಕಾರ್ಯ ಮುಂದುವರಿಸಲಾಗಿದೆ.

Key words: Bangalore, Bomb threat, Italian ,embassy