Tuesday, September 29, 2026

BDA Apartments

ಫೆ.9ಕ್ಕೆ ಮೆಟ್ರೋ ಪ್ರಯಾಣ ದರ ಏರಿಕೆ ಇಲ್ಲ- ಸಂಸದ ತೇಜಸ್ವಿ ಸೂರ್ಯ BDA JK_Adv BDA Adv
Home Front Page ಫೆ.9ಕ್ಕೆ ಮೆಟ್ರೋ ಪ್ರಯಾಣ ದರ ಏರಿಕೆ ಇಲ್ಲ- ಸಂಸದ ತೇಜಸ್ವಿ ಸೂರ್ಯ

ಫೆ.9ಕ್ಕೆ ಮೆಟ್ರೋ ಪ್ರಯಾಣ ದರ ಏರಿಕೆ ಇಲ್ಲ- ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು, ಫೆಬ್ರವರಿ,7,2026 (www.justkannada.in):   ಮೆಟ್ರೋ ಪ್ರಯಾಣಿಕರಿಗೆ  ಸಿಹಿಸುದ್ದಿ ಸಿಕ್ಕಿದ್ದು ಫೆ.9ಕ್ಕೆ ಮೆಟ್ರೋ ಪ್ರಯಾಣ ದರ ಏರಿಕೆಯಾಗುವುದಿಲ್ಲಎಂದು  ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಸಂಸದ ತೇಜಸ್ವಿ ಸೂರ್ಯ, ಮೆಟ್ರೋ ದರ ಏರಿಕೆ ಬಗ್ಗೆ ಮನೋಹರ್ ಲಾಲ್ ಖಟ್ಟರ್ ಜತೆ ದೂರವಾಣಿ ಸಂಭಾಷಣೆ ಮಾಡಿರುವೆ. ಫೆಬ್ರವರಿ 9ರಿಂದ ಮೆಟ್ರೋ ಟಿಕೆಟ್ ದರ ಹೆಚ್ಚಿಸದಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ದೇಶದಲ್ಲೇ ನಮ್ಮ ಮೆಟ್ರೋ ಅತ್ಯಂತ ದುಬಾರಿ ಮೆಟ್ರೋ ಸೇವೆಯಾಗಿದೆ. ಮೆಟ್ರೋ ಪ್ರಯಾಣ ದರ ವ್ಯತ್ಯಾಸದ ಬಗ್ಗೆ ಕೇಂದ್ರದ ಗಮನ ಸೆಳೆದಿದ್ದೇನೆ. ಮೆಟ್ರೋ ಟಿಕೆಟ್ ದರ ಏರಿಕೆಯಿಂದ ಲಕ್ಷಾಂತರ ಜನರಿಗೆ ಹೊರೆಯಾಗಲಿದೆ. ಸಾರ್ವಜನಿಕ ಸಾರಿಗೆ ತಲುಪಲು ಕಷ್ಟವಾಗುತ್ತದೆ. ಹೀಗಾಗಿ ಪ್ರಸ್ತಾವಿತ ದರ ಏರಿಕೆ ತಾತ್ಕಾಲಿಕವಾಗಿ ತಡೆ ಹಿಡಿಯಲು ಸೂಚಿಸಿದ್ದು, ಸೋಮವಾರದಿಂದ ಮೆಟ್ರೋ ಟೆಕೆಟ್ ದರ ಹೆಚ್ಚಳವಾಗಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

Key words: No increase, metro fares, MP Tejaswi Surya