Friday, September 25, 2026

BDA Apartments

ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಬಿಜೆಪಿ ಶಾಸಕನಿಗೆ ಬಂಧನದ ಭೀತಿ BDA JK_Adv B...
Home Crime ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಬಿಜೆಪಿ ಶಾಸಕನಿಗೆ ಬಂಧನದ ಭೀತಿ

ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಬಿಜೆಪಿ ಶಾಸಕನಿಗೆ ಬಂಧನದ ಭೀತಿ

ಬೆಂಗಳೂರು, ಫೆಬ್ರವರಿ,10,2026 (www.justkannada.in): ರೌಡಿಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್  ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್​ ನಲ್ಲಿ​ ವಜಾ‌ಗೊಂಡಿದ್ದು  ಈ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್​​ ಗೆ  ಮತ್ತೆ ಸಂಕಷ್ಟ ಎದುರಾಗಿದೆ.ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ bhyrathi

ಇದೀಗ ಜಾಮೀನು ಅರ್ಜಿ ವಜಾಗೊಂಡಿರುವುದರಿಂದ ಶಾಸಕ ಭೈರತಿ ಬಸವರಾಜುಗೆ  ಬಂಧನದ ಭೀತಿ ಎದುರಾಗಿದ್ದು, ಪೊಲೀಸರು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ. ಕಳೆದ ವರ್ಷ ಜುಲೈನಲ್ಲಿ   ಬೆಂಗಳೂರಿನ ಹಲಸೂರಿನಲ್ಲಿ ರೌಡಿ ಬಿಕ್ಲುಶಿವನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಭೈರತಿ ಬಸವರಾಜು ಕೂಡ ಆರೋಪಿಯಾಗಿದ್ದಾರೆ.

Key words:  High Court, dismisses, bail plea, BJP, MLA