Tuesday, September 15, 2026

BDA Apartments

ಆಳಂದದ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ BD...
Home Front Page ಆಳಂದದ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್

ಆಳಂದದ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್

ಕಲಬುರಗಿ, ಫೆಬ್ರವರಿ,12,2026 (www.justkannada.in):  ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆ ನಡೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಹೌದು, ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾಶಿವರಾತ್ರಿಯಂದು ಪೂಜೆ ಸಲ್ಲಿಸಲು ಸುಪ್ರೀಂ ಕೋರ್ಟ್ ಸಂಪೂರ್ಣ ಅನುಮತಿ ನೀಡಿದೆ. ದರ್ಗಾ ಆವರಣದಲ್ಲಿ ಪೂಜೆಗೆ ಅವಕಾಶ ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದರ್ಗಾ ಸಮಿತಿಯು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಪೂಜೆಗೆ ತಡೆ ನೀಡಲು ನಿರಾಕರಿಸಿದೆ.

ನೆನ್ನೆ ಕಲಬುರಗಿ ಹೈಕೋರ್ಟ್‌ ​ಪೀಠ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಅನುಮತಿ ನೀಡಿತ್ತು. ಇದೀಗ ಸುಪ್ರೀಂ ಕೋರ್ಟ್​ ಹೈಕೋರ್ಟ್​​ನ ಆದೇಶವನ್ನು ಎತ್ತಿ ಹಿಡಿದಿದೆ.

ಸಂವಿಧಾನದ 32ನೇ ವಿಧಿ (Article 32) ಇಂತಹ ಉದ್ದೇಶಗಳಿಗಾಗಿ ಅಲ್ಲ ಎಂದು ಸುಪ್ರೀಂ ಕೋರ್ಟ್ ಅರ್ಜಿದಾರರ ವಿರುದ್ಧ ಗರಂ ಆಗಿದೆ.  ಕೂಡಲೇ ಅರ್ಜಿಯನ್ನು ಹಿಂಪಡೆಯುವಂತೆ ದರ್ಗಾ ಪರ ಅರ್ಜಿದಾರರಿಗೆ ಸೂಚನೆ ನೀಡಿತು.  ಆಳಂದದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿ ರಾಘವ ಚೈತನ್ಯ ಶಿವಲಿಂಗವಿದ್ದು ಇಲ್ಲಿ ಪೂಜೆ ಸಲ್ಲಿಸುವ ವಿಚಾರವಾಗಿ ಕಳೆದ ಕೆಲವು ವರ್ಷಗಳಿಂದ ಎರಡು ಸಮುದಾಯಗಳ ನಡುವೆ ಕಾನೂನು ಹೋರಾಟ ನಡೆಯುತ್ತಿದೆ.

Key words: Supreme Court, green signal, Shivaratri puja , Alanda dargah