Wednesday, September 30, 2026

BDA Apartments

ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ BDA JK_Adv BDA Adv
Home Front Page ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್

ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್

ಬೆಂಗಳೂರು,ಫೆಬ್ರವರಿ,13,2026 (www.justkannada.in): ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್​​​ ಮಂಡಿಸಲು ಈಗಾಗಲೇ ಸಿದ್ಧತೆ ನಡೆಸುತ್ತಿದ್ದು ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ.

ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್​ ಮಂಡಿಸಲಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಮಾರ್ಚ್‌ 6ರಿಂದ ಮಾರ್ಚ್‌ 27ರ ವರೆಗೆ ಒಟ್ಟು 14 ದಿನಗಳ ಕಾಲ ರಾಜ್ಯ ಬಜೆಟ್‌ ಅಧಿವೇಶನ ನಡೆಸಲು ಗುರುವಾರ ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಮಾರ್ಚ್‌ 6ರಂದು ದಾಖಲೆಯ 17ನೇ ಬಜೆಟ್‌ ಅನ್ನು ನಾನು ಮಂಡನೆ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್​​​ ಮಂಡಿಸಲು ಈಗಾಗಲೇ ಸಿದ್ಧತೆ ನಡೆಸುತ್ತಿದ್ದಾರೆ. ಈ ಬಾರಿ 17ನೇ ಸಲ ಬಜೆಟ್ ಮಂಡಿಸುವ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್​ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

Key words: Date fixed, state budget, CM Siddaramaiah