ಶಬರಿಮಲೆ ವಿವಾದ: ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆ

ನವದೆಹಲಿ,ಫೆಬ್ರವರಿ,16,2026 (www.justkannada.in): ಕೇರಳದ ಶಬರಿಮಲೆ ದೇವಾಲಯಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡುವ 2018 ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ 9 ನ್ಯಾಯಾಧೀಶರ ಸಾಂವಿಧಾನಿಕ ಪೀಠವನ್ನು ರಚಿಸಿದೆ.

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಮರುಪರಿಶೀಲನಾ ಅರ್ಜಿಗಳ ವಿಚಾರಣೆಗೆ ಒಪ್ಪಿಗೆ ನೀಡಿದ್ದು  ಏಪ್ರಿಲ್ 7ರಿಂದ ಈ ವಿಚಾರಣೆ ಆರಂಭವಾಗಲಿದ್ದು, ಒಂಭತ್ತು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಇದನ್ನು ನಡೆಸಲಿದೆ.  ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಒಳಗೊಂಡ 9 ನ್ಯಾಯಮೂರ್ತಿಗಳ ಸಾಂವಿಧಾನಕ ಪೀಠ ರಚನೆ ಮಾಡಿ ಸಿಜೆಐ ಸೂರ್ಯಕಾಂತ್ ಆದೇಶಿಸಿದ್ದಾರೆ.

2018ರಲ್ಲಿ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು ಮಹಿಳೆಯರಿಗೆ ಶಬರಿಮಲೆಗೆ ಪ್ರವೇಶಕ್ಕೆ ಅವಕಾಶ ನೀಡಿ ತೀರ್ಪು ನೀಡಿತ್ತು. ಆದರೆ, ಈ ತೀರ್ಪಿನ ನಂತರ ಭಕ್ತರು ಮತ್ತು ಧಾರ್ಮಿಕ ಹೋರಾಟಗಾರರಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಹಿಂದಿನ ತೀರ್ಪನ್ನು ಸಾಂವಿಧಾನಿಕ ಪೀಠವೇ ನೀಡಿತ್ತು. ಹೀಗಾಗಿ  ಹೀಗಾಗಿ ಒಂಭತ್ತು ನ್ಯಾಯಾಧೀಶರ ಸಾಂವಿಧಾನಿಕಪೀಠವನ್ನು ರಚಿಸಲಾಗಿದೆ.

ಏಪ್ರಿಲ್ 7 ಮತ್ತು 9ರಂದು ವಾದಿಗಳಿಗೆ, ಹಾಗೂ ಏಪ್ರಿಲ್ 14, 15 ಮತ್ತು 16ರಂದು ಪ್ರತಿವಾದಿಗಳಿಗೆ ವಾದ ಮಂಡಿಸಲು ಅವಕಾಶ ನೀಡಲಾಗಿದೆ. ಏಪ್ರಿಲ್ 14ರೊಳಗೆ ಲಿಖಿತ ರೂಪದಲ್ಲಿ ವಾದ-ಪ್ರತಿವಾದಗಳನ್ನು ಸಲ್ಲಿಸಲು ಸೂಚಿಸಲಾಗಿದೆ.

Key words: Sabarimala, case, Constitution bench, formed