ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಳವಳ: ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಫೆಬ್ರವರಿ,24,2026 (www.justkannda.in):  ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದು ಶೀಘ್ರದಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ  ಮಾಡುವುದಾಗಿ ಭರವಸೆ ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ,  ಧಾರವಾಡದಲ್ಲಿ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಗಳನ್ನು ನಾನು ಗಂಭೀರವಾಗಿ ಗಮನಿಸುತ್ತೇನೆ. ನಮ್ಮ ಅನೇಕ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ, ಹತಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಪ್ರತಿಯೊಂದು ಅರ್ಜಿಯ ಹಿಂದೆಯೂ ಒಂದು ಕನಸು, ಕುಟುಂಬದ ಭರವಸೆ, ವರ್ಷಗಳ ಕಠಿಣ ಪರಿಶ್ರಮ ಮತ್ತು ಕರ್ನಾಟಕಕ್ಕೆ ಸೇವೆ ಸಲ್ಲಿಸುವ ಆಕಾಂಕ್ಷೆ ಇದೆ. ಮುಖ್ಯಮಂತ್ರಿಯಾಗಿ, ನಿಮ್ಮ ಕಾಳಜಿಗಳನ್ನು ಕೇಳಲಾಗುತ್ತದೆ ಮತ್ತು ನಿಮ್ಮ ಭವಿಷ್ಯವು ನಮಗೆ ತುಂಬಾ ಮುಖ್ಯವಾಗಿದೆ ಎಂದು ಪ್ರತಿಯೊಬ್ಬ ವಿದ್ಯಾರ್ಥಿಯೂ ತಿಳಿದುಕೊಳ್ಳಬೇಕು ಎಂದಿದ್ದಾರೆ.

ನಾವು ಅಧಿಕಾರಕ್ಕೆ ಬಂದಾಗ, 2.64 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿಯಿದ್ದವು. ಇದು ಒಂದೆರೆಡು ದಿನಗಳಲ್ಲಿ ಸೃಷ್ಟಿಯಾದುದಲ್ಲ; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಕಾಲದಲ್ಲಿ ನೇಮಕಾತಿಗಳನ್ನು ಆರಂಭಿಸದಿರುವುದು ಮತ್ತು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಯಾವುದೇ ಸೂಕ್ತ ಯೋಜನೆಯನ್ನು ರೂಪಿಸದಿರುವುದರಿಂದ ಇಷ್ಟು ದೊಡ್ಡ ಸಂಖ್ಯೆಯ ಸರ್ಕಾರಿ ಹುದ್ದೆಗಳು ಖಾಲಿಯಿದ್ದವು. ವಿರೋಧ ಪಕ್ಷದ ನಾಯಕರು ನಿರಪರಾಧಿ ವಿದ್ಯಾರ್ಥಿಗಳಿಗೆ ತಪ್ಪು ಮಾರ್ಗದರ್ಶನ ಮಾಡಿ ತಮ್ಮ ರಾಜಕೀಯ ಸ್ವಾರ್ಥದ ಈಡೇರಿಕೆಗಾಗಿ ಬಳಸಿಕೊಳ್ಳುತ್ತಿರುವುದು ವಿಷಾದನೀಯ ಎಂದಿದ್ದಾರೆ.

ಉದ್ಯೋಗದ ನಿರೀಕ್ಷೆಯಲ್ಲಿರುವ ಯುವ ಜನರನ್ನು ಉಜ್ವಲ ಭವಿಷ್ಯದ ಕಡೆ ಯೋಚಿಸಲು ಪ್ರೇರೇಪಿಸುವ ಬದಲು, ಅವರ ಮೂಲಕ ಅಶಾಂತಿಯನ್ನು ಉಂಟುಮಾಡಲು ಹೊರಟಿರುವ ವಿಪಕ್ಷ ನಾಯಕರ ನಡೆ ಖಂಡನೀಯ. ಇಂದಿನ ಈ ದುಸ್ಥಿತಿಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದರೆ 2019ರಿಂದ 2023ರವರೆಗಿನ ನೇಮಕಾತಿಯಲ್ಲಿ ನಡೆದ ಅಕ್ರಮಗಳು ಮತ್ತು ಭ್ರಷ್ಟಾಚಾರಗಳು ಕಾರಣ. ಇದು ಯುವಜನರು ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವಂತೆ ಮಾಡಿದ್ದು ಮಾತ್ರವಲ್ಲ, ದೊಡ್ಡ ಪ್ರಮಾಣದ ಖಾಲಿ ಹುದ್ದೆಗಳ ಸೃಷ್ಟಿಗೆ ಕಾರಣವಾಯಿತು. ನಮ್ಮ ಸರ್ಕಾರ ನೇಮಕಾತಿ ಪ್ರಕ್ರಿಯೆಯಲ್ಲಿ ವಿಶ್ವಾಸಾರ್ಹತೆ, ಪಾರದರ್ಶಕತೆ ಮತ್ತು ಸ್ಥಿರತೆಯನ್ನು ಮರುಸ್ಥಾಪಿಸಲು ಬದ್ಧವಾಗಿದೆ. ಇದೇ ವೇಳೆ ಒಳ ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಪ್ರಕರಣಗಳು ನಡೆಯುತ್ತಿದ್ದ ಕಾರಣದಿಂದ ಹಲವು ನೇಮಕಾತಿ ಪ್ರಕ್ರಿಯೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಯಿತು. ಸಂವಿಧಾನದ ಪಾಲನೆ ಮತ್ತು ಸಾಮಾಜಿಕ ನ್ಯಾಯಕ್ಕೆ ಬದ್ಧವಾದ ಸರ್ಕಾರವಾಗಿ, ಸಾವಿರಾರು ಅಭ್ಯರ್ಥಿಗಳ ವೃತ್ತಿಜೀವನಕ್ಕೆ ಧಕ್ಕೆ ತರುವಂತಹ ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳದೆ ಕಾನೂನಿನ ಚೌಕಟ್ಟಿನೊಳಗೆ ಜವಾಬ್ದಾರಿಯುತವಾಗಿ ವರ್ತಿಸಲು ನಾವು ನಿರ್ಧರಿಸಿದ್ದೇವೆ.

ಈ ರಚನಾತ್ಮಕ ಮತ್ತು ಕಾನೂನು ಅಡೆತಡೆಗಳ ಹೊರತಾಗಿಯೂ, ನಮ್ಮ ಸರ್ಕಾರವು ದೃಢಸಂಕಲ್ಪ ಮತ್ತು ಪ್ರಾಮಾಣಿಕತೆಯಿಂದ ಮುಂದುವರಿದಿದೆ. ಕಳೆದ ಎರಡೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ನಡಸಲಾಗಿದೆ. ವರ್ಷಗಳ ಕಾಲ ಕಾಯಬೇಕಾದ ಅನೇಕ ಅಭ್ಯರ್ಥಿಗಳ ಕಷ್ಟವನ್ನು ನಾವು ಅರಿತಿದ್ದೇವೆ. ಈ ಕಷ್ಟವನ್ನು ಗುರುತಿಸಿ, ಮುಂಬರುವ ನೇಮಕಾತಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷ ಸಡಿಲಗೊಳಿಸಲಾಗಿದೆ; ಇದರಿಂದ ನೇಮಕಾತಿಯಲ್ಲಾದ ವಿಳಂಬದಿಂದ ಅರ್ಹ ಅಭ್ಯರ್ಥಿಗಳು ಅನ್ಯಾಯಕ್ಕೊಳಗಾಗದಂತೆ ತಡೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಉಳಿದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಪಾರದರ್ಶಕ, ವ್ಯವಸ್ಥಿತ ಮತ್ತು ಕಾಲಮಿತಿಯೊಳಗೆ ಇವೆಲ್ಲವನ್ನು ಭರ್ತಿ ಮಾಡಲಾಗುವುದು ಎಂಬ ವಾಗ್ದಾನ ನೀಡುತ್ತಿದ್ದೇನೆ. ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಹುದ್ದೆಗಳ ನೇಮಕಾತಿಗಾಗಿ ಎಲ್ಲಾ ಅಗತ್ಯ ಆಡಳಿತಾತ್ಮಕ ಮತ್ತು ನೀತಿ ನಿರೂಪಣೆ ಮಾನದಂಡಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಭಾರೀ ಸಂಖ್ಯೆಯಲ್ಲಿ ಖಾಲಿ ಹುದ್ದೆಗಳು ಬಾಕಿ ಉಳಿಯದಂತೆ ತಡೆಯಲು ನೇಮಕಾತಿ ಸಂಸ್ಥೆಗಳನ್ನು ಬಲಪಡಿಸಲಾಗುತ್ತಿದೆ.

ಇದು ಕೇವಲ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದು ಮಾತ್ರವಲ್ಲ. ಆಡಳಿತ ಯಂತ್ರದ ಸಾಮರ್ಥ್ಯವನ್ನು ಮರು ನಿರ್ಮಾಣ ಮಾಡುವುದು, ನೇಮಕಾತಿಯಲ್ಲಿ ನ್ಯಾಯವನ್ನು ಮರುಸ್ಥಾಪಿಸುವುದು ಮತ್ತು ಪ್ರತಿ ಅರ್ಹ ಅಭ್ಯರ್ಥಿಗೆ ಸಮುದಾಯ ಅಥವಾ ಪ್ರದೇಶದ ಬೇಧಭಾವವಿಲ್ಲದೆ ಸಮಾನ ಅವಕಾಶವನ್ನು ಖಚಿತಪಡಿಸುವುದಾಗಿದೆ

ಉದ್ಯೋಗದ ನಿರೀಕ್ಷೆಯಲ್ಲಿರುವ ಯುವ ಜನರಲ್ಲಿ ನನ್ನದೊಂದು ಮನವಿ. ನಿಮ್ಮ ಶಿಕ್ಷಣ, ಕೌಶಲ್ಯ ಮತ್ತು ಪೂರ್ವತಯಾರಿಯ ಮೇಲೆ ಆತ್ಮವಿಶ್ವಾಸ ಮತ್ತು ಭರವಸೆಯನ್ನಿಡಿ. ನಾಡಿನ ಯುವಜನರೇ ನಮ್ಮ ಭವಿಷ್ಯದ ವಾಸ್ತುಶಿಲ್ಪಿಗಳು. ನಮ್ಮ ಸರ್ಕಾರ ನಿಮ್ಮೊಂದಿಗೆ ದೃಢವಾಗಿ ನಿಂತಿದೆ, ಮುಂದೆಯೂ ನಿಲ್ಲಲಿದೆ. ಇದು ಬರೀ ಬಾಯಿ ಮಾತಲ್ಲ, ನಮ್ಮ ನಡೆಯಲ್ಲಿಯೂ ಇದನ್ನು ಪಾಲಿಸುತ್ತಿದ್ದೇವೆ.

ಸರ್ಕಾರಿ ಉದ್ಯೋಗ ಪಡೆಯಬೇಕು, ನೆಮ್ಮದಿಯ ಬದುಕು ಕಟ್ಟಿಕೊಳ್ಳಬೇಕು ಮತ್ತು ಸಮಾಜಕ್ಕಾಗಿ ಸೇವೆ ಸಲ್ಲಿಸಬೇಕು ಎಂಬ ಕನಸು ಹೊತ್ತಿರುವ ಪ್ರತಿಯೊಬ್ಬ ಉದ್ಯೋಗಾಕಾಂಕ್ಷಿಯ ಆಸೆ – ಆಕಾಂಕ್ಷೆಯನ್ನು ರಕ್ಷಿಸಿ, ಪ್ರತಿ ಅರ್ಹ ವ್ಯಕ್ತಿಗೆ ಸೂಕ್ತ ಉದ್ಯೋಗವನ್ನು ಖಚಿತಪಡಿಸಲು ನಾವು ಬದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ENGLISH SUMMARY..

I take serious note of the ongoing protests by government job aspirants in Dharwad. I understand the anxiety, frustration, and uncertainty that many of our government job aspirants are experiencing. Behind every application is a dream, a family’s hope, years of hard work, and an aspiration to serve Karnataka. As Chief Minister, I want every student to know that your concerns are heard, and your future matters deeply to us.

When we assumed office, over 2.64 lakh government posts were vacant. This massive backlog did not arise overnight, it was the result of prolonged inaction under the previous BJP government, which failed to initiate timely recruitments or create a structured roadmap to fill vacancies. It is deeply unfortunate that BJP opposition leaders are choosing to mislead innocent students even now to serve their narrow political interests. Instead of encouraging aspirants to stay focused on their preparation and future, they are attempting to instigate unrest. The present situation is largely a consequence of the series of recruitment irregularities and corruption scandals between 2019 and 2023, which eroded trust in the system and resulted in a massive backlog of vacancies. Our government is committed to restoring credibility, transparency, and stability in the recruitment process.

At the same time, several recruitment processes had to be temporarily stalled due to legal challenges surrounding internal reservation, which was under consideration before the Hon’ble Courts. As a government committed to constitutional propriety and social justice, we chose to act responsibly within the framework of law rather than rush decisions that could jeopardize the careers of thousands of candidates.

Despite these structural and legal constraints, our government has moved with determination and integrity. In the last 2.5 years alone, more than 40,000 recruitments have been completed across departments. We are also conscious that many aspirants have waited for years due to delays beyond their control. Recognizing this hardship, the government has relaxed the age criteria by over 5 years for upcoming recruitments, ensuring that deserving candidates are not unfairly excluded because of systemic delays.

I want to assure that the process of filling the remaining vacancies is ongoing and will be further accelerated in a transparent, systematic, and time-bound manner. We are taking all necessary administrative and policy measures to recruit for more positions in the coming years and to strengthen recruitment institutions so that such backlogs do not recur.

This is not merely about filling posts; it is about rebuilding administrative capacity, restoring fairness in recruitment, and ensuring that every deserving candidate, across regions and communities, receives equal opportunity.

I appeal to all the aspirants to continue focusing on your education, skill-building, and preparation with confidence and patience. Karnataka’s youth are the architects of our future. Your perseverance inspires us. My government stands firmly with you, not just in words, but in action. We will ensure opportunities are expanded, dreams are protected, and public service remains a noble and attainable path for every deserving young mind.

Key words: protest, job, Dharwad, CM Siddaramaiah, assurance