Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page ಖಾಲಿ ಹುದ್ದೆಗಳ ಭರ್ತಿಗೆ ವಿದ್ಯಾರ್ಥಿಗಳ ಹೋರಾಟ: ಸರ್ಕಾರದ ವಿರುದ್ದ ಕೇಂದ್ರ ಸಚಿವ ಹೆಚ್.ಡಿಕೆ ವಾಗ್ದಾಳಿ

ಖಾಲಿ ಹುದ್ದೆಗಳ ಭರ್ತಿಗೆ ವಿದ್ಯಾರ್ಥಿಗಳ ಹೋರಾಟ: ಸರ್ಕಾರದ ವಿರುದ್ದ ಕೇಂದ್ರ ಸಚಿವ ಹೆಚ್.ಡಿಕೆ ವಾಗ್ದಾಳಿ

ಚಾಮರಾಜನಗರ,ಫೆಬ್ರವರಿ,26,2026 (www.justkannada.in): ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಕಳೆದ ಎರಡು ದಿನದ ಹಿಂದೆ ಧಾರವಾಡದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ.

ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಬರಿ ಸುಳ್ಳು ಅಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದಿದ್ದಾರೆ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಸರಿದೂಗಿಸಲು ಆಗುತ್ತಿಲ್ಲ. ಖಾಲಿ ಇರುವ ಹುದ್ದೆ ಭರ್ತಿ ಮಾಡುವಲ್ಲಿ ಸರ್ಕಾರ ಎಡವಿದೆ. ರಾಜ್ಯ ಸರ್ಕಾರದ ವಿರುದ್ದ ಉದ್ಯೋಗಾಕಾಂಕ್ಷಿಗಳು ತಿರುಗಿ ಬಿದ್ದಿದ್ದಾರೆ ಈಗ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ ಅಂತಾ ಸಿಎಂ ಹೇಳುತ್ತಾರೆ ಏನು ಮಾಡುತ್ತಾರೆ ನೋಡಬೇಕು  ಎಂದರು.

ಗುತ್ತಿಗೆದಾರರು ಬದುಕಲು ಸಾಧ್ಯವಾಗದ ಪರಿಸ್ಥಿತಿ  ನಿರ್ಮಾಣವಾಗಿದೆ. ಈ ಹಿಂದೆ 40% ಕಮಿಷನ್  ಎಂದು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದರು. ಈಗ ಮಾಡುತ್ತಿರುವುದು ಏನು? ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎಂದು ಹೆಚ್ ಡಿಕೆ ಟೀಕಿಸಿದರು.

Key words: Students, struggle, fill, vacancies, Union Minister, HDK,  government