Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page ಬಲ್ಡೋಟಾ ಕಾರ್ಖಾನೆಗೆ ವಿರೋಧ: ಇದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರಲ್ಲ ಎಂದ ಎಂ.ಬಿ ಪಾಟೀಲ್

ಬಲ್ಡೋಟಾ ಕಾರ್ಖಾನೆಗೆ ವಿರೋಧ: ಇದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರಲ್ಲ ಎಂದ ಎಂ.ಬಿ ಪಾಟೀಲ್

ಬೆಂಗಳೂರು,ಫೆಬ್ರವರಿ,26,2026 (www.justkannada.in): ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕಳೆದ ಎರಡು ದಿನದ ಹಿಂದೆ ಕೊಪ್ಪಳದಲ್ಲಿ ಪ್ರತಿಭಟನೆ ನಡೆದ ವಿಚಾರಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ಬಲ್ಡೋಟಾ ಕಾರ್ಖಾನೆ ವಿಚಾರವಾಗಿ ಸದನದಲ್ಲಿ ಉತ್ತರ ನೀಡಿದ್ದೇನೆ. ಕಾರ್ಖಾನೆಗೆ ಕೇಂದ್ರ ಸರ್ಕಾರವೇ ಅನುಮತಿ ನೀಡಿದೆ. ಇದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರಲ್ಲ. ಮಾಲಿನ್ಯ  ಉಂಟು ಮಾಡುವ ಕಾರ್ಖಾನೆಗೆ ನಾವು ಬೆಂಬಲ ನೀಡಲ್ಲ ಎಂದರು.

ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಈಗಾಗಲೇ ಸಿಎಂ ಹೇಳಿಕೆ ನೀಡಿದ್ದಾರೆ. ಖಾಲಿ ಹುದ್ದೆಗಳನ್ನು ನಿಗದಿತ ಅವಧಿಯಲ್ಲಿ ಭರ್ತಿ ಮಾಡಬೇಕು.  ಹುದ್ದೆ ಭರ್ತಿ ಮಾಡುವುದಕ್ಕೆ ಈಗಾಗಲೇ ಸರ್ಕಾರ ಭರವಸೆ ನೀಡಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

Key words: Opposition, Baldota factory, Minister, M.B. Patil