ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಕೇಸ್: ಅರವಿಂದ ಕೇಜ್ರಿವಾಲ್, ಸಿಸೋಡಿಯಾ ಖುಲಾಸೆ

ನವದೆಹಲಿ,ಫೆಬ್ರವರಿ,27,2026 (www.justkannada.in): ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾರನ್ನ ಖುಲಾಸೆಗೊಳಿಸಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಆದೇಶಿಸಿದೆ.

ಈ ಮೂಲಕ ಅರವಿಂದ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾಗೆ ಬಿಗ್ ರಿಲೀಫ್ ಸಿಕ್ಕಿದೆ.  ಪ್ರಕರಣ ಸಂಬಂಧ ಕೇಜ್ರಿವಾಲ್,  ಸಿಸೋಡಿಯಾ ಸೇರಿದಂತೆ 23 ಜನರನ್ನು ಕೋರ್ಟ್  ಆರೋಪ ಮುಕ್ತಗೊಳಿಸಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯ ಅವರನ್ನು ಖುಲಾಸೆಗೊಳಿಸಿದೆ ಎನ್ನಲಾಗಿದೆ.

ತೀರ್ಪು ಪ್ರಕಟವಾದ ಬಳಿಕ ಅರವಿಂದ ಕೇಜ್ರಿವಾಲ್ ಕಣ್ಣೀರು ಹಾಕಿದ್ದು, ನಮ್ಮ ವಿರುದ್ದ ಸುಳ್ಳು ಭ್ರಷ್ಟಾಚಾರ ಆರೋಪ ಮಾಡಿದ್ದರು. ಆಪ್ ಪಕ್ಷವನ್ನು ಮುಗಿಸಲು ಸಂಚು ರೂಪಿಸಿದ್ದರು  ಎಂದರು.

Key words: Excise policy revision fraud case, Arvind Kejriwal, Sisodia, acquitted