ಬೆಂಗಳೂರು,ಮಾರ್ಚ್,2,2026 (www.justkannada.in): ಇರಾನ್ ಮೇಲೆ ಇಸ್ರೇಲ್ , ಅಮೇರಿಕಾ ಜಂಟಿ ದಾಳಿ ನಡೆಸಿದ ಪರಿಣಾಮ ಪ್ರತಿಯಾಗಿ ಇರಾನ್ ಕೂಡ ದಾಳಿ ಮುಂದುವರೆಸಿದ್ದು ಮಧ್ಯಪ್ರಾಚ್ಯದ ದೇಶಗಳಲ್ಲಿ ಉದ್ವಿಗ್ನತೆ ಹೆಚ್ಚುಗುತ್ತಿದೆ. ಈ ಹಿನ್ನೆಲೆಯಲ್ಲಿ ಅಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಪ್ರಧಾನಿ ಮೋದಿಗೆ ಎರಡು ಪುಟಗಳ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಮಧ್ಯಪ್ರಾಚ್ಯದ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ಕನ್ನಡಿಗರು ಮತ್ತು ಇತರ ಭಾರತೀಯರನ್ನು ರಕ್ಷಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಕೋರುತ್ತಿದ್ದೇನೆ.
ರಾಜತಾಂತ್ರಿಕ ಸಂಪರ್ಕವನ್ನು ಬಲಪಡಿಸುವುದು, ಅಗತ್ಯವಿದ್ದರೆ ವಿಶೇಷ ವಾಪಸಾತಿ ವಿಮಾನಗಳಿಗೆ ಸಿದ್ಧತೆ ಮತ್ತು ರಾಯಭಾರ ಕಚೇರಿಗಳು ಮತ್ತು ವಿಮಾನಯಾನ ಸಂಸ್ಥೆಗಳ ಮೂಲಕ ಸಂಘಟಿತ ಬೆಂಬಲ ನೀಡುವಂತೆ ನಾನು ಒತ್ತಾಯಿಸಿದ್ದೇನೆ. ನಮ್ಮ ಜನರ ಸುರಕ್ಷತೆ ಮತ್ತು ಸುರಕ್ಷಿತವಾಗಿ ತಾಯ್ನಾಡಿಗೆ ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕವು ಸಂಪೂರ್ಣವಾಗಿ ಸಹಕರಿಸಲು ಸಿದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Key words: CM Siddaramaiah, letter, PM Modi







