ತಂಪುಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆ: ರಾಜ್ಯ ಮಕ್ಕಳ ಆಯೋಗದಿಂದ ಸ್ವಯಂಪ್ರೇರಿತ ದೂರು

ಬೆಂಗಳೂರು,ಮಾರ್ಚ್,5,2026 (www.justkannada.in): ಮಕ್ಕಳಿಗೆ ಕೂಲ್ ಡ್ರಿಂಕ್ಸ್ ಕೊಡುವ ಮೊದಲು ಎಚ್ಚರ ವಹಿಸಬೇಕು. ಹೌದು ಇದೀಗ ತಂಪುಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ ಎನ್ನಲಾಗಿದ್ದು ಈ ಸಂಬಂಧ ರಾಜ್ಯ ಮಕ್ಕಳ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಜ್ಯೂಸ್ ಮಾದರಿಯ  buzz ballz ಟಿನ್ ರೂಪದಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿದ್ದು ಇದರಲ್ಲಿ ಅಧಿಕ ಸಕ್ಕರೆಮಟ್ಟ ಮತ್ತು ವಿಷಕಾರಿ ಅಂಶ ಪತ್ತೆಯಾಗಿದೆ ಎನ್ನಲಾಗಿದೆ.

ರಾಜ್ಯ .ಮಕ್ಕಳ ಆಯೋಗ ಈ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು buzz ballz ಟಿನ್ ರೂಪದ ಕೂಲ್ ಡ್ರಿಂಕ್ಸ್   ಮುಕ್ತವಾಗಿ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಅವಕಾಶ ನೀಡದಂತೆ  ಕರ್ನಾಟಕ ರಾಜ್ಯ ಔಷಧ ನಿಯಂತ್ರಣ ಇಲಾಖೆಗೆ ಪತ್ರ ಬರೆದಿದೆ ಎನ್ನಲಾಗಿದೆ.

Key words: Toxic, found, soft drink, complaint,  State Children’s Commission