ಬೆಂಗಳೂರು,ಮಾರ್ಚ್,5,2026 (www.justkannada.in): ಕೆಪಿ ಎಸ್ ಸಿಯಲ್ಲಿ ಮತ್ತೆ ಅಕ್ರಮದ ಆರೋಪ ಕೇಳಿ ಬಂದಿದ್ದು ಕೆಎಎಸ್ ಮುಖ್ಯ ಪರೀಕ್ಷೆಯಲ್ಲಿ ಒಂದೇ ಕುಟುಂಬದವರು ಆಯ್ಕೆಯಾದ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಈ ಸಂಬಂಧ ಸರ್ಕಾರ ಸೂಕ್ತ ಮಾಹಿತಿ ಸಂಗ್ರಹಿಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ ಸುರೇಶ್ ಆಗ್ರಹಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್, ಕರ್ನಾಟಕ ಲೋಕಸೇವಾ ಆಯೋಗದ ಮುಖ್ಯ ಪರೀಕ್ಷೆಯಲ್ಲಿ ಒಂದೇ ಕುಟುಂಬದವರು ಆಯ್ಕೆಯಾಗಿದ್ದಾರೆ. ಇದು ಅತ್ಯಂತ ಗಂಭೀರವಾದ ವಿಚಾರ. ಒಂದೇ ಕೊಠರಡಿಯಲ್ಲಿದ್ದ ಒಂದೇ ಕುಟುಂಬದ ಹಲವರು ಆಯ್ಕೆ ಇದು ಕೆಪಿಎಸ್ ಸಿ ಬಗ್ಗೆ ಅಪನಂಬಿಕೆಗೆ ಕಾರಣ ಆಗಲಿದೆ. ಮಾಸ್ ಕಾಪಿ ಆಗಿದ್ಯಾ ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತದೆ. ನೊಂದ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಒದಗಿಸಬೇಕು. ಇದು ಉದ್ಯೋಗಾಕಾಂಕ್ಷಿಗಳ ಮೇಲೆ ಪರಿಣಾಮ ಬೀರುತ್ತೆ ರಾಜ್ಯ ಸರ್ಕಾರ ಈ ಬಗ್ಗೆ ಸೂಕ್ತ ಮಾಹಿತಿ ಸಂಗ್ರಹಿಸಬೇಕು. ತಪ್ಪಿತಸ್ಟರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದರು.
ಫೋನ್ ಟ್ಯಾಪಿಂಗ್ ಆರೋಪ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಉತ್ತರ ನೀಡಲಿದೆ. ನಾನೊಬ್ಬ ಜನಸಾಮಾನ್ಯ. ಕುರಿತು ಕೇಂದ್ರ ಸಚಿವ ಹೆಚ್ ಡಿಕೆಗೆ ಗೊತ್ತಿರುತ್ತೆ. ಕುಮಾರಸ್ವಾಮಿ ಸಿಎಂ ಆಗಿದ್ದವರು ಅವರಿಗೆ ಗೊತ್ತಿರುತ್ತೆ ಎಂದು ಟಾಂಗ್ ಕೊಟ್ಟರು.
Key words: KPSC, Illegal, allegation, DK Suresh







