ಪಾಟ್ನಾ, ಮಾರ್ಚ್,5,2026 (www.justkannada.in): ರಾಜ್ಯಸಭೆ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಬಿಹಾರ ಸೇರಿದಂತೆ 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ ನಡೆಯಲಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಹ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿದ್ದರು.
ನವೆಂಬರ್ 20 ರಂದು ಪಾಟ್ನಾದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇದಾದ ಕೇವಲ ನಾಲ್ಕು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ. ತಮ್ಮ ಸಂಸದೀಯ ಪ್ರಯಾಣದ ಆರಂಭದಿಂದಲೂ ಬಿಹಾರ ವಿಧಾನಸಭೆಯ ಎರಡೂ ಸದನಗಳ ಹಾಗೂ ಸಂಸತ್ತಿನ ಎರಡೂ ಸದನಗಳ ಸದಸ್ಯರಾಗಲು ಬಯಸಿದ್ದೆ ಎಂದು ಕುಮಾರ್ ಹೇಳಿದ್ದಾರೆ.
Key words: Rajya Sabha, elections, Bihar CM, Nitish Kumar, files, nomination







