ಬೆಂಗಳೂರು,ಮಾರ್ಚ್,6,2026 (www.justkannada.in): ರಾಜ್ಯದ 2026-27ನೇ ಸಾಲಿನ ಬಜೆಟ್ ಮಂಡನೆ ಆರಂಭವಾಗಿದ್ದು ಸಿಎಂ ಸಿದ್ದರಾಮಯ್ಯ ಅಯವ್ಯಯ ಮಂಡನೆ ಮಾಡುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಬಜೆಟ್ಗೆ ಅನುಮೋದನೆ ಸಿಕ್ಕಿತ್ತು. ನಂತರ ಬಜೆಟ್ ಅಧಿವೇಶನ ಆರಂಭವಾಗಿದ್ದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ. 17 ನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ ಬಜೆಟ್ ಇದಾಗಿದೆ.
ಬಜೆಟ್ ಗಾತ್ರ 4.49 ಲಕ್ಷ ಕೋಟಿ ರೂ. ಆಗಿದೆ. 2026-27ನೇ ಸಾಲಿನ ಅಯವ್ಯಯ ಮಂಡಿಸಲು ಖುಷಿ ಆಗುತ್ತಿದೆ. 2023ರಿಂದ ನಾವು ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ದಿ ಮಾಡಿದ್ದೇವೆ. ಗ್ಯಾರಂಟಿ ಮೂಲಕ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Key words: CM Siddaramaiah, begins, budget







