ಬೆಂಗಳೂರು,ಮಾರ್ಚ್,6,2026 (www.justkannada.in): ರಾಜ್ಯದಲ್ಲಿ 8,24,389 ಕೋಟಿ ರೂ. ಸಾಲವಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ಸುಧಾರಣೆಯಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ 20260-27ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಆರ್ಥಿಕ ಅಭಿವೃದ್ಧಿಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ, ಹೆಚ್ಚು ಹಾಲು ಕೊಡುವ ಹಸುಗಳಿಗೆ ಹೆಚ್ಚು ಆರೈಕೆ ಮಾಡಬೇಕು, ಒಕ್ಕೂಟ ಸರ್ಕಾರವೂ ಸಂವೇದನಾ ಶೀಲತೆಯಿಂದ ವರ್ತಿಸಬೇಕು, ಗ್ಯಾರಂಟಿ ಯೋಜನೆಗಳ ಮೂಲಕ ಜನರ ಆರ್ಥಿಕ ಸುಧಾರಣೆ ಆಗ್ತಿದೆ, ಸೌಕರ್ಯ ಅಭಿವೃದ್ದಿಗೂ ನಾವು ಗಮನ ಹರಿಸಿದ್ದೇವೆ ಎಂದು ಹೇಳಿದ್ದಾರೆ.
ಕರ್ನಾಟಕದ ಒಟ್ಟು ಸಾಲ 8 ಲಕ್ಷ 24,000 389 ಕೋಟಿ ರೂ. ಇದೆ, ಗಣಿಗಾರಿಕೆಯಿಂದ 11,000 ಕೋಟಿ ರೂಪಾಯಿ ಶುಲ್ಕ ಅಂದಾಜು ಬರಬಹುದೆಂದು ಅಂದಾಜಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ
ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ ತೆರೆಯಲಾಗುತ್ತದೆ, ಕುವೆಂಪು ವಿವಿಯಲ್ಲಿ ಅಧ್ಯಯನ ಪೀಠ ಸ್ಥಾಪನೆ ಮಾಡಲಾಗುವುದು ಎಂದು 2026-27ನೇ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್ ವೇ
ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್ ವೇ ನಿರ್ಮಾಣ ಮಾಡಲಾಗುತ್ತದೆ. ಪಿಪಿಪಿ ಮಾದರಿಯಲ್ಲಿ ರೋಪ್ ವೇ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
Key words: Rs 8,24,389 crore, state. Loan, Budget, CM Siddaramaiah







