ಬೆಂಗಳೂರು,ಮಾರ್ಚ್,6,2026 (www.justkannada.in): ಈ ವರ್ಷ 56,432 ಉದ್ಯೋಗ ಭರ್ತಿಗೆ ಚಾಲನೆ ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಇಂದು 2026-27ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, ನೇಮಕಾತಿಗೆ ವಯೋಮಿತಿ 5 ವರ್ಷಗಳ ಸಡಿಲಿಕೆ ನೀಡಿದ್ದೇವೆ . ಕರ್ನಾಟಕ 45 ಉತ್ಪನ್ನಗಳಿಗೆ GI ಮಾನ್ಯತೆ ದೊರೆತಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯ 259 ಕಲ್ಯಾಣಿಗಳ ಪುನರುಜ್ಜೀವನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಕಾರ್ಮಿಕರ ಮಕ್ಕಳಿಗಾಗಿ ನೂತನ 62 ವಸತಿ ಶ್ರಮಿಕ ಶಾಲೆ ಆರಂಭಿಸಲಾಗುತ್ತದೆ. ಒಟ್ಟು 104 ಶಾಲೆಗಳ ಆರಂಭಕ್ಕೆ ಆದ್ಯತೆ ನೀಡಲಾಗುತ್ತದೆ. ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಕೌಶಲ್ಯ ತರಬೇತಿ ಅಕಾಡೆಮಿ ತೆರೆಯಲಾಗುತ್ತದೆ. 200 ಕೋಟಿ ರೂಪಾಯಿ ವೆಚ್ಚದಲ್ಲಿ ಅಕಾಡೆಮಿ ಸ್ಥಾಪನೆ ಮಾಡಲಾಗುತ್ತದೆ. ಕಾರ್ಮಿಕರ ವಿಮಾ ಸೊಸೈಟಿಯಿಂದ ಹುಬ್ಬಳ್ಳಿ, ಇಂದಿರಾನಗರ , ಮೈಸೂರು, ದೊಡ್ಡ ಬಳ್ಳಾಪುರದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಆರಂಭಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
60 ಕೋಟಿ ರೂ. ವೆಚ್ಚದಲ್ಲಿ ನೂತನ 10 GTTC ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿಸಿದ ಸಿಎಂ ಸಿದ್ದರಾಮಯ್ಯ ಈ ವರ್ಷ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲಿಡಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
Key words: CM Siddaramaiah, announces, 56,432 job, filling, Budget







