Wednesday, September 9, 2026

BDA Apartments

Home Front Page ಮಹಿಳಾ ದಿನಾಚರಣೆ: ರಾಜಮಾತೆ ಕೆಂಪನಂಜಮ್ಮಣ್ಣಿ ಸ್ಮರಿಸಿದ ವೀರ ಸಾವರ್ಕರ್ ಯುವ ಬಳಗ.

ಮಹಿಳಾ ದಿನಾಚರಣೆ: ರಾಜಮಾತೆ ಕೆಂಪನಂಜಮ್ಮಣ್ಣಿ ಸ್ಮರಿಸಿದ ವೀರ ಸಾವರ್ಕರ್ ಯುವ ಬಳಗ.

ಮೈಸೂರು,ಮಾರ್ಚ್,9,2026 (www.justkannada.in): ವೀರ ಸಾವರ್ಕರ್ ಯುವ ಬಳಗದ ವತಿಯಿಂದ ನಗರದ ದಿವಾನ್ಸ್ ರಸ್ತೆಯಲ್ಲಿರುವ ಖಾಸಗಿ  ಹೋಟೆಲ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮೈಸೂರಿನ ರಾಜಮಾತೆ ಕೆಂಪನಂಜಮ್ಮಣ್ಣಿ ಅವರನ್ನು ಸ್ಮರಿಸಿದರು.

ಭಾರತ ಮಾತೆ ಹಾಗೂ ಕೆಂಪನಂಜಮಣ್ಣಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಬಿಜೆಪಿ ಸಹ ಪ್ರಭಾರಿ  ಡಾ.ಈ.ಸಿ.ನಿಂಗರಾಜ್ ಗೌಡ ರವರು ಮೈಸೂರು ನಗರಕ್ಕೆ ರಾಜಮಾತೆ ಕೊಡುಗೆ ಅಪಾರ ,ಕೆ.ಆರ್.ಎಸ್‌. ಅಣೆಕಟ್ಟು ಕಟ್ಟುವಾಗ ಹಣಕಾಸಿನ ಕೊರತೆಯಾದಾಗ ತಮ್ಮ ಮೈ ಮೇಲಿದ್ದ ಒಡವೆ ಮಾರಿ ಅಣೆಕಟ್ಟು ಪೂರ್ಣಗೊಳ್ಳಲು ಸಹಾಯ ಮಾಡಿದ ನಮ್ಮ ಹೆಮ್ಮೆಯ ಮಹಾರಾಣಿ ಕೆಂಪ ನಂಜಮ್ಮಣ್ಣಿ  ಅವರ ಸ್ಮರಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ತಿಳಿಸಿದರು.

ಮೈಸೂರು ನಗರದ ವಿಸ್ತರಣೆ ಹಾಗೂ ಪೈಪ್ ಗಳಮೂಲಕ ನೀರು ಸರಬರಾಜು ಮತ್ತು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಂಕುಸ್ಥಾಪನೆ, ಭಾರತದಲ್ಲಿಯೇ ಮೊದಲ ಬಾರಿಗೆ ಶಿವನ ಸಮುದ್ರ ವಿದ್ಯುತ್ ಉತ್ಪಾದನೆ, ರೈತರ ಅನೂಕೂಲಕ್ಕಾಗಿ ಚೆತ್ರದುರ್ಗದಲ್ಲಿ ಮಾರಿ ಕಣಿವೆ ಅಣೆಕಟ್ಟು, ಮಹಿಳೆಯರ ವಿದ್ಯಾಭ್ಯಾಸಕ್ಕೆ ಅನುಕೂಲಕ್ಕಾಗಿ ಮಹಾರಾಣಿ ಕಾಲೇಜು ಸ್ಧಾಪನೆ, ಬೆಂಗಳೂರಿನಲ್ಲಿ ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಸೈನ್ಸ್ ಪ್ರಾಂರಂಭಸಿರುವುದು ಇವರ ಕಾರ್ಯಕ್ಕೆ ಉತ್ತಮ ಸಾಕ್ಷಿಯಾಗಿದೆ.

ಅವರು ಕಟ್ಟಾ ಹಿಂದೂ ಧರ್ಮದ ಅನುಯಾಯಿಯಾಗಿದ್ದರು, ಇಂತಹ ಮಹಾನ್ ಸಾಧಕೀಯರು ಇಂದಿನ ಮಹಿಳೆಯರಿಗೆ ಸ್ಪೂರ್ತಿದಾಯಕರು ಎಂದು ಡಾ.ಈ.ಸಿ.ನಿಂಗರಾಜ್ ಗೌಡ ಹೇಳಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡ ಪರಮೇಶ್ ಗೌಡ, ಬಾಲಣ್ಣ, ಸಂದೇಶ್, ಉಮೇಶ್, ಪ್ರಮೋದ್ ಗೌಡ, ಭೈರಪ್ಪ, ಗಂಗಣ್ಣ, ಗೋಪಾಲ್, ಅಶ್ವಥ್, ಜಯಪ್ಪ, ಕೆ.ಎನ್. ಸಂತೋಷ್, ಮಂಜುನಾಥ್ ಎಸ್. ಗೌಡ, ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ವಸಂತ ಮನೀಶ್, ಚಂದ್ರಕಲಾ, ರಶ್ಮಿ, ಮಧು, ಗೀತಾ, ಒಕ್ಕಲಿಗರ ಸಂಘದ ನಿರ್ದೇಶಕ ಚೇತನ್ ಗೌಡ , ಪ್ರವೀಣ್, ರಾಜಣ್ಣ, ವಿಜಯ್, ಅಭಿ ಇನ್ನಿತರರು ಹಾಜರಿದ್ದರು.

Key words: Women’s Day,  Veer Savarkar Youth Grou,  Rajmata, Kempananjammanni.