Wednesday, September 9, 2026

BDA Apartments

Home Front Page 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ: MDA ಬಜೆಟ್‌ ನಲ್ಲಿ ಅಭಿವೃದ್ಧಿಗೆ ಒತ್ತು

799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ: MDA ಬಜೆಟ್‌ ನಲ್ಲಿ ಅಭಿವೃದ್ಧಿಗೆ ಒತ್ತು

ಮೈಸೂರು,ಮಾರ್ಚ್,9,2026 (www.justkannada.in): ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಪ್ರಸಕ್ತ ಆರ್ಥಿಕ ವರ್ಷದ ಬಜೆಟ್‌ನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಿದ್ದು, ಒಟ್ಟು ₹799.90 ಕೋಟಿ ಸಂಪನ್ಮೂಲಗಳನ್ನು ಸಂಗ್ರಹಿಸುವ ನಿರೀಕ್ಷೆ ವ್ಯಕ್ತಪಡಿಸಿದೆ.

ಬಡಾವಣೆಗಳ ಅಭಿವೃದ್ಧಿ ಹಾಗೂ ವಿವಿಧ ಮೂಲಸೌಕರ್ಯ ಕಾಮಗಾರಿಗಳಿಗೆ ₹579.18 ಕೋಟಿ ವೆಚ್ಚ ಮಾಡಲು ಪ್ರಸ್ತಾವನೆ ಮಾಡಲಾಗಿದೆ. ವೆಚ್ಚವನ್ನು ಕಡಿತ ಮಾಡಿದ ನಂತರ ಪ್ರಾಧಿಕಾರಕ್ಕೆ ಸುಮಾರು ₹220.72 ಕೋಟಿ ನಿವ್ವಳ ಆದಾಯ ಬರಲಿದೆ ಎಂದು ಅಂದಾಜಿಸಲಾಗಿದೆ.

ಬಜೆಟ್‌ನಲ್ಲಿ ನಗರದ ಪ್ರಮುಖ ಜಂಕ್ಷನ್‌ ಗಳ ಅಭಿವೃದ್ಧಿ, ಕೆರೆಗಳ ಪುನರುಜ್ಜೀವನ, ಹಾಗೂ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ ಡಿಪಿಆರ್ ಸಿದ್ಧಪಡಿಸುವುದು ಸೇರಿದಂತೆ ಹಲವು ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಇದಕ್ಕೂ ಜೊತೆಗೆ ಕಬಿನಿ ಯೋಜನೆ ಉನ್ನತೀಕರಣಕ್ಕೂ ಪ್ರಾಧಿಕಾರ ಮುಂದಾಗಿದೆ.

ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಬೊಮ್ಮೇನಹಳ್ಳಿ, ಕಮರಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ರೈತರ ಸಹಭಾಗಿತ್ವದಲ್ಲಿ ಬಡಾವಣೆ ನಿರ್ಮಾಣ ಮಾಡಲು ಮಹತ್ವಾಕಾಂಕ್ಷಿ ಯೋಜನೆ ರೂಪಿಸಲಾಗಿದ್ದು, ಈ ಯೋಜನೆಗೆ ₹460 ಕೋಟಿ ಮೀಸಲಿಡಲಾಗಿದೆ.

ಮೈಸೂರಿನ ವಿಜಯಶ್ರೀಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸುಮಾರು 90 ಎಕರೆ ಪ್ರದೇಶದಲ್ಲಿ ಹೊಸ ಬಡಾವಣೆ ನಿರ್ಮಾಣಕ್ಕೆ ₹20 ಕೋಟಿ ಕಾಯ್ದಿರಿಸಲಾಗಿದೆ ಎಂದು ಆಯುಕ್ತ ರಕ್ಷಿತ್ ತಿಳಿಸಿದ್ದಾರೆ.

ಒಟ್ಟಾರೆ, ಈ ಬಜೆಟ್‌ನಲ್ಲಿ ನಗರದ ಮೂಲಸೌಕರ್ಯ ವಿಸ್ತರಣೆ ಹಾಗೂ ಹೊಸ ಬಡಾವಣೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.

Key words: Rs. 799.90 crore, resource, MDA, budget, development