ಬೆಂಗಳೂರು,ಮಾರ್ಚ್,10,2026 (www.justkannada.in): ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ ಒಟ್ಟು 71 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ ಎಂದು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಮಾಹಿತಿ ನೀಡಿದರು.
ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಟಿ.ಶರವಣ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿರುವ ಸಚಿವ ಶಿವಾನಂದ್ ಪಾಟೀಲ್, ಕಳೆದ ಹಣಕಾಸು ವರ್ಷದಲ್ಲಿ 82 ಲಕ್ಷ ಕೋಟಿ ರೂ. ವಹಿವಾಟು ನಡೆದಿತ್ತು. ಈ ಬಾರಿ 71 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ. 476.65 ಕೋಟಿ ರೂ. ಮಾರುಕಟ್ಟೆ ಶುಲ್ಕ ಸಂಗ್ರಹವಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 170 ಎಪಿಎಂಸಿಗಳಿವೆ. ಅಂಗಡಿಗಳ ಹಂಚಿಕೆ ಪ್ರಕ್ರಿಯೆ ನಿರಂತರವಾಗಿದ್ದು, 141 ಎಪಿಎಂಸಿಗಳಲ್ಲಿ ಅಂಗಡಿ ಹರಾಜು ಬಾಕಿ ಇದ್ದು, ಕ್ರಮ ಕೈಗೊಳ್ಳಲು ಸಮಿತಿಗಳಿಗೆ ಸೂಚನೆ ನೀಡಲಾಗಿದೆ. ವಾಣಿಜ್ಯ ಸ್ವರೂಪದ ಚಿಕ್ಕ ಮಳಿಗೆಗಳನ್ನು 55 ತಿಂಗಳ ಹಂಚಿಕೆ ಅವಧಿ ಮುಕ್ತಾಯವಾದ ನಂತರ ಮತ್ತೆ ಮುಂದುವರಿಸಲು ಅವಕಾಶ ಇಲ್ಲ. ಅಂತಹ ಅಂಗಡಿಗಳನ್ನು ಹೊಸದಾಗಿ ಟೆಂಡರ್ ಕರೆದು ಬೇಡಿಕೆಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಿದ್ದೇವೆ ಎಂದು ಶಿವಾನಂದ್ ಪಾಟೀಲ್ ಉತ್ತರಿಸಿದರು.
Key words: 70 lakh crore, rupees, APMCs, Minister, Shivanand Patil







