ವೈದ್ಯರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬೆಂಗಳೂರು,ಮಾರ್ಚ್,11,2026 (www.justkannada.in):  ನೇಮಕಾತಿ ನಿಯಮ ತಿದ್ದುಪಡಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕರೆ ನಿಡಿದ್ದ ಸರ್ಕಾರಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ಮುಷ್ಕರ ತಾತ್ಕಾಲಿಕವಾಗಿ ಮುಂದೂಡಿಕೆಯಾಗಿದೆ.

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಇಂದು ಕರೆ ಕೊಟ್ಟಿದ್ದ ಮುಷ್ಕರವು ರದ್ದಾಗಿದೆ. ನಿನ್ನೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಜತೆಗೆ ವೈದ್ಯಾಧಿಕಾರಿಗಳ ಸಂಘವು ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು ಮುಷ್ಕರ ತಾತ್ಕಾಲಿಕ ಮುಂದೂಡಿಕೆಯಾಗಿದೆ.

ಕಳೆದ ಹಲವು ದಿನಗಳಿಂದ ತಮ್ಮ ಬೇಡಿಕೆ ಈಡೇರಿಸುವಂತೆ ಪಟ್ಟು ಹಿಡಿದಿದ್ದ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಮುಷ್ಕರಕ್ಕೆ ಕರೆ ಕೊಟ್ಟಿತ್ತು. ಇದರ ಬೆನ್ನಲ್ಲೇ ನಿನ್ನೆ ಸಂಜೆ ವೈದ್ಯಾಧಿಕಾರಿಗಳ ಸಂಘದ ಮುಖಂಡರ ಜತೆಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಂಧಾನ ಸಭೆ ನಡೆಸಿದ್ದರು. ಬಹುತೇಕ ಬೇಡಿಕೆ ಈಡೇರಿಸುವ ಬಗ್ಗೆ ಆಶ್ವಾಸನೆ ನೀಡಿರುವ ಬೆನ್ನಲ್ಲೇ ಸರ್ಕಾರಿ ವೈದ್ಯಾಧಿಕಾರಿಗಳು ಮುಷ್ಕರವನ್ನು ಮುಂದೂಡಿದ್ದಾರೆ.

Key words: Doctors, strike, temporarily, postponed