Thursday, September 10, 2026

BDA Apartments

Home Front Page ಮಲೆಮಹದೇಶ್ವರ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಆತಂಕ

ಮಲೆಮಹದೇಶ್ವರ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಆತಂಕ

ಚಾಮರಾಜನಗರ,ಮಾರ್ಚ್,11,2026 (www.justkannada.in):  ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಭಕ್ತರಲ್ಲಿ ಆತಂಕ ಮನೆ ಮಾಡಿದೆ.

ಮಲೇ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.  ಬೆಟ್ಟದ ಆನೆ ತಲೆದಿಂಬದ ಬಳಿ  ರಸ್ತೆಯ ಇಳಿಜಾರಿನ ತಿರುವಿನಲ್ಲಿ ತಡೆಗೋಡೆ ಪಕ್ಕದಲ್ಲಿ ಚಿರತೆ ಕಾಣಿಸಿಕೊಂಡಿದೆ ಎನ್ನಲಾಗಿದೆ.

ವಾಹನದಲ್ಲಿ ತೆರಳುತ್ತಿದ್ದವರ ಮೊಬೈಲ್ ಕ್ಯಾಮರಾದಲ್ಲಿ ಚಿರತೆ ಸೆರೆಯಾಗಿದ್ದು ಭಕ್ತರಲ್ಲಿ ಆತಂಕ ಹೆಚ್ಚಾಗಿದೆ. ಇತ್ತೀಚೆಗೆ ಶಿವರಾತ್ರಿ ಜಾತ್ರೆ ಪಾದಯಾತ್ರೆಗೆ ತೆರಳುತ್ತಿದ್ದ ಯಾತ್ರಿಕರೊಬ್ಬರ ಮೇಲೆ ಚಿರತೆ ದಾಳಿ ಮಾಡಿತ್ತು.ಈ ವೇಳೆ ಯಾತ್ರಿಕರೊಬ್ಬರು ಚಿರತೆ ದಾಳಿಗೆ ಬಲಿಯಾಗಿದ್ದರು.

Key words: Leopard, Malemahadeshwara hill, Devotees, worried