Monday, September 14, 2026

BDA Apartments

ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚೆ B...
Home Front Page ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚೆ

ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚೆ

ಬೆಂಗಳೂರು,ಮಾರ್ಚ್,13,2026 (www.justkannada.in): ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು ಉಪಚುನಾವಣೆಗಳ ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ಕ್ಷೇತ್ರ ಮತ್ತು ಹೆಚ್ ವೈ ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ  ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು  ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿ ಕೋರ್ ಕಮಿಟಿ ಸದಸ್ಯರು ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಉಪಚುನಾವಣೆಯ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಚರ್ಚೆಯಾಗಲಿದ್ದು  ಬಳಿಕ ಬಿಜೆಪಿ ಕೇಂದ್ರಿಯ ಚುನಾವಣಾ ಸಮಿತಿಗೆ ಅಂತಿಮ ಪಟ್ಟಿ ಶಿಫಾರಸ್ಸು ಮಾಡಲಿದ್ದಾರೆ ಎನ್ನಲಾಗಿದೆ.

Key words: State, BJP, core committee, meeting, today