Wednesday, July 29, 2026

BDA Apartments

Home Front Page ಗ್ಯಾರಂಟಿ ಯೋಜನೆ ಹಿಂಪಡೆಯಿರಿ ಎಂದು ಬಿಜೆಪಿ ನಿರ್ಣಯ ಮಂಡಿಸಲಿ- ಡಿಸಿಎಂ ಡಿಕೆ ಶಿವಕುಮಾರ್ ಸವಾಲು

ಗ್ಯಾರಂಟಿ ಯೋಜನೆ ಹಿಂಪಡೆಯಿರಿ ಎಂದು ಬಿಜೆಪಿ ನಿರ್ಣಯ ಮಂಡಿಸಲಿ- ಡಿಸಿಎಂ ಡಿಕೆ ಶಿವಕುಮಾರ್ ಸವಾಲು

ಬೆಂಗಳೂರು,ಮಾರ್ಚ್,13,2026 (www.justkannada.in): ಗ್ಯಾರಂಟಿ ಯೋಜನೆಗಳನ್ನು ಮರುಪರಿಶೀಲನೆ ಮಾಡಿ ಅಥವಾ ಹಿಂಪಡೆಯಿರಿ ಎಂದು ಬಿಜೆಪಿಯಿಂದ ಸದನದಲ್ಲಿ ನಿರ್ಣಯ ಮಂಡಿಸಲಿ ಎಂದು ಡಿಸಿಎಂ  ಡಿಕೆ ಶಿವಕುಮಾರ್ ಸವಾಲು ಹಾಕಿದರು.

ವಿಧಾನಸಭೆಯಲ್ಲಿ ಬಜೆಟ್ ಕುರಿತು ಚರ್ಚೆ ವೇಳೆ ಬಿಜೆಪಿ ಶಾಸಕ ಸುರೇಶ್ ಗೌಡ ಅವರು ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಬೇಕು ಎಂದು ಹೇಳಿದರು. ಈ ಕುರಿತು  ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್,  ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಿರಿ, ಮರುಪರಿಶೀಲನೆ ಮಾಡಿ ಎಂದು ಬಿಜೆಪಿಯಿಂದ ಅಧಿಕೃತ ತೀರ್ಮಾನ ಮಾಡಿ ಸದನದಲ್ಲಿ ನಿರ್ಣಯ ಮಂಡಿಸಲಿ, ಆನಂತರ ಜನರ ಮುಂದೆ ಸದನದಲ್ಲಿ ಇದರ ಬಗ್ಗೆ ಚರ್ಚೆ ಮಾಡೋಣ ಎಂದರು.

ಸುರೇಶ್ ಅವರೇ ಈ ಅಭಿಪ್ರಾಯ ಕೇವಲ ನಿಮ್ಮ ವೈಯಕ್ತಿಕವಲ್ಲ. ಅದು ಪಕ್ಷದ ಅಭಿಪ್ರಾಯ. ನೀವು ಏನು ಹೇಳುವಿರೋ ಅದರ ಬಗ್ಗೆ ಚಿಂತನೆ ನಡೆಸೋಣ. ನೀವು ಹೇಳುತ್ತಿರುವುದು ಸರಿಯಿಲ್ಲ ಎಂದು ಹೇಳುತ್ತಿಲ್ಲ. ಈ ಬಜೆಟ್ ಅಧಿವೇಶನದ ಒಳಗೆಯೇ ನಿಮ್ಮ ತೀರ್ಮಾನ ತಿಳಿಸಿ ಎಂದು ಡಿಕೆ ಶಿವಕುಮಾರ್ ಟಾಂಗ್ ಕೊಟ್ಟರು.

ಗ್ಯಾರಂಟಿ ಕೊಡುವಾಗ ನಮ್ಮನ್ನು ನೀವು ಕೇಳಿದ್ದರಾ ಎಂದು ಸುರೇಶ್  ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಬಿಎಸ್ ಯಡಿಯೂರಪ್ಪ ಅವರು ಒಂದು ಕಾಳು ಕಡಿಮೆ ಆದರೂ ಬಿಡುವುದಿಲ್ಲ ಎಂದು ಹೇಳಿದ್ದರು. ಅದಕ್ಕೆ ಆರು ತಿಂಗಳಲ್ಲಿ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದವು ನಿಮ್ಮ ಮಾತನ್ನೂ ಕೇಳಿ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ ಎಂದು ಡಿಕೆ ಶಿವಕುಮಾರ್ ಚಾಟಿ ಬೀಸಿದರು.

Key words: BJP , withdraw, guarantee scheme, DCM, DK Shivakumar