ಉಪಚುನಾವಣೆ ಟಿಕೆಟ್ ಕಗ್ಗಂಟು: ಸುರ್ಜೇವಾಲಗೆ ಅಭಿಪ್ರಾಯ ತಿಳಿಸಿದ ಸಿಎಂ, ಡಿಸಿಎಂ, ಸಚಿವರು

ಬೆಂಗಳೂರು,ಮಾರ್ಚ್,20,2026 (www.justkannada.in):  ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಕಾಂಗ್ರೆಸ್ ಟಿಕೆಟ್ ಗೆ ಪೈಪೋಟಿ ಉಂಟಾಗಿದ್ದು ಟಿಕೆಟ್ ಹಂಚಿಕೆ ಸಮಸ್ಯೆ ಬಗೆಹರಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮುಂದಾಗಿದ್ದಾರೆ.

ಇದಕ್ಕಾಗಿಯೇ ಬೆಂಗಳೂರಿಗೆ ಆಗಮಿಸಿರುವ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಟಿಕೆಟ್ ಹಂಚಿಕೆ ಕುರಿತು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ ಎನ್ನಲಾಗಿದೆ.

ಇನ್ನು ಸಿಎಂ ಮತ್ತು ಡಿಸಿಎಂ ಭೇಟಿಗೂ ಮುನ್ನ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಮತ್ತು ಈಶ್ವರ್ ಖಂಡ್ರೆ ಅವರು ರಣದೀಪ್ ಸಿಂಗ್ ಸುರ್ಜೇವಾಲರನ್ನ ಭೇಟಿಯಾಗಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಈಗಾಗಲೇ ಟಿಕೆಟ್ ಘೋಷಣೆಗೂ ಮುನ್ನ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

Key words: By-election, ticket,  CM, DCM, Ranadeep singh Surjewala